ಜಮ್ಮು-ಕಾಶ್ಮೀರ: ಪೊಲೀಸರ ವಾಹನದ ಮೇಲೆ ಉಗ್ರರ ದಾಳಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಕ್ವಾಜಿಗುಂದ್ ಪ್ರದೇಶದಲ್ಲಿ ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನ ಕ್ವಾಜಿಗುಂದ್ ಪ್ರದೇಶದಲ್ಲಿ ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಕುಲ್ಗಾಂ, ಶೋಪಿಯಾನ್, ಅನಂತ್ ನಾಗ್ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸುವುದಕ್ಕೂ ಮುನ್ನ ತ್ರಾಲ್'ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಪೋಸ್ಟರ್ ವೊಂದು ಕಾಣಿಸಿಕೊಂಡಿದ್ದರು. ಪೋಸ್ಟರ್ ನಲ್ಲಿ ಸೇನಾಪಡೆ ನಡೆಸುವ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಾರದು ಎಂದು ಸೂಚಿಸಲಾಗಿತ್ತು.
ಪೋಸ್ಟರ್ ಪತ್ತೆಯಾದ ಕೆಲವೇ ಗಂಟೆಗಲ್ಲಿ ಉಗ್ರರು ಪೊಲೀಸರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾ ಪಡೆಗಳು, ಉಗ್ರರನ್ನು ಸದೆಬಡಿಯಲು ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirಉಗ್ರರ ದಾಳಿterrorist attackKulgamಕುಲ್ಗಾಮ್Police vehicleಪೊಲೀಸರ ವಾಹನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


