ರ್ಯಾನ್ ಶಾಲಾ ವಿದ್ಯಾರ್ಥಿ ಹತ್ಯೆ: ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಕಂಡಕ್ಟರ್ ಕುಟುಂಬ ಚಿಂತನೆ
ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.

Published On :
ನವದೆಹಲಿ: ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.
ಬಸ್ ಕಂಡಕ್ಟರ್ ಅಶೋಕ್ ಕುಮಾರ್ ವಿರುದ್ಧ ಹತ್ಯೆ ಪ್ರಕರಣದಲ್ಲಿ ಬಲವಾದ ಸಾಕ್ಷ್ಯಾಧಾರಗಳು ಇರಲಿಲ್ಲ ಎಂದು ಸಿಬಿಐ ಇತ್ತೀಚೆಗಷ್ಟೇ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ನಿರ್ದೋಷಿ ಎಂಬುದು ಬಹುತೇಕ ಸಾಬೀತಾಗಿದ್ದು, ಗುರುಗ್ರಾಮ ವಿಶೇಷ ತನಿಖಾ ದಳದ ವಿರುದ್ಧ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿದ್ದೇವೆ ಎಂದು ಕಂಡಕ್ಟರ್ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಕಂಡಕ್ಟರ್ ನ್ನು ಬಂಧಿಸಿದ್ದ ವಿಶೇಷ ತನಿಖಾ ದಳದ ಸಿಬ್ಬಂದಿಗಳು ಅಪರಾಧವನ್ನು ಒಪ್ಪಿಕೊಳ್ಳುವಂತೆ ಆತನಿಗೆ ಚಿತ್ರ ಹಿಂಸೆ ನೀಡಿದ್ದರು ಎಂದು ಅಶೋಕ್ ಕುಮಾರ್ ಅವರ ತಂದೆ ಅಮೀರ್ ಚಂದ್ ಆರೋಪಿಸಿದ್ದು ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಗ್ರಾಮಸ್ಥರಿಂದ ಹಣಕಾಸಿನ ನೆರವು ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


