ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ: ಅರ್ಜಿ ವಿಚಾರಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀದಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

Published On :
ನವದೆಹಲಿ: ಕೆಲವು ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಚಾರ ಸಂಬಂಧ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ಸಂಪರ್ಕಿಸುವಂತೆ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ದೆಹಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮುಖಂಡ ಮತ್ತು ವಕೀಲರಾಗಿರುವ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅಲ್ಪಸಂಖ್ಯಾತರ ಹಕ್ಕುಗಳನ್ನು ಬಹುಸಂಖ್ಯಾತರು "ಕಾನೂನುಬಾಹಿರವಾಗಿ ಮತ್ತು ನಿರಂಕುಶವಾಗಿ" ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದ್ದು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವಾಗಲೀ ಹಿಂದೂಗಳನ್ನು ರಾಷ್ಟ್ರೀಯ ಅಲ್ಪಸಂಖ್ಯಾತರ ಕಾಯ್ದೆ 1992 ರ ಅಡಿಯಲ್ಲಿ 'ಅಲ್ಪಸಂಖ್ಯಾತ' ಎಂದು ಸೂಚಿಸಿಲ್ಲ. ಆದರೆ ಲಕ್ಷದ್ವೀಪ, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಜಮ್ಮು ಮತ್ತು ಕಾಶ್ಮೀರ, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಪಂಜಾಬ್ ಗಳಲ್ಲಿ ಹಿಂದೂ ಸಮುದಾಯ ಅಲ್ಪಸಂಖ್ಯಾತವಾಗಿದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Hindusಅಲ್ಪಸಂಖ್ಯಾತರುMinorityಹಿಂದೂಗಳುNational Commission of Minorities ActAshwini Kumar Upadhyaಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗಅಶ್ವಿನಿ ಕುಮಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


