ಟಿಪ್ಪು ಜಯಂತಿ: ರಾಜ್ಯ ಸರ್ಕಾರದ ಆಚರಣೆಗೆ ಬಿಜೆಪಿ ವಿರೋಧ
ಇಂದು ಕರ್ನಾಟಕ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಭಾರತೀಯ ಜನತಾ ಪಾರ್ಟಿ ವಿರೋಧ ....

Published On :
ನವದೆಹಲಿ: ಇಂದು ಕರ್ನಾಟಕ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಭಾರತೀಯ ಜನತಾ ಪಾರ್ಟಿ ವಿರೋಧ ವ್ಯಕ್ತಪಡಿಸಿದೆ. ರಾಜ್ಯದ ಜನತೆಯ ಸಮಸ್ಯೆಗಳ ಬಗ್ಗೆ ಗಮನ ಹರಿಸದೆ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಬಗ್ಗೆ ಗಮನ ಹರಿಸಿದಂತಿದೆ ಎಂದು ಬಿಜೆಪಿ ನಾಯಕ ಶಹ್ನವಾಜ್ ಹುಸೇನ್ ಟೀಕಿಸಿದ್ದಾರೆ.
ಕರ್ನಾಟಕ ಸರ್ಕಾರ ರಾಜ್ಯದ ಜನತೆಯ, ಬಡವರ ಮತ್ತು ರೈತರ ನೋವು, ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಬದಲಿಗೆ ಟಿಪ್ಪು ಸುಲ್ತಾನ್ ಬಗ್ಗೆ ಆತಂಕಗೊಂಡಂತಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ರಾಮೀಣ ರೈತರ ಬಗ್ಗೆ ಗಮನ ಹರಿಸುವುದು ಯಾವಾಗ ಎಂದು ಕೇಳಿದರು.
ಜನರನ್ನು ಓಲೈಸಲು ಕಾಂಗ್ರೆಸ್ ಇಂತಹ ಸಾಹಸಗಳನ್ನು ಮಾಡಲು ಹೊರಟಿದೆ. ಆದರೆ ಬಿಜೆಪಿ ಇಂತಹ ಕಾರ್ಯಕ್ರಮಗಳಿಗೆ ಕೈ ಜೋಡಿಸುವುದಿಲ್ಲ ಎಂದು ಬಿಜೆಪಿ ವಕ್ತಾರ ಜಾಫರ್ ಇಸ್ಲಾಂ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಪ್ರಕಾರ, ಟಿಪ್ಪು ಒಬ್ಬ ದೇಶಭಕ್ತನಾಗಿದ್ದು ಆತ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದ. ಆದರೆ ಬಿಜೆಪಿ ಮತ್ತು ಆರ್ ಎಸ್ಎಸ್ ದೃಷ್ಟಿಕೋನ ಸಂಪೂರ್ಣ ಭಿನ್ನವಾಗಿದೆ. ಟಿಪ್ಪು ಸುಲ್ತಾನ್ ಹಿಂದುಗಳ ವಿರುದ್ಧ ಪಕ್ಷಪಾತ ಮಾಡಿದ್ದಕ್ಕಾಗಿ ನಿರಂಕುಶ ರಾಜನಾಗಿದ್ದ ಎಂದು ಬಿಜೆಪಿ ನಾಯಕರು ಹೇಳುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


