2019ರಲ್ಲಿ ಕಾಂಗ್ರೆಸ್ ನಿಂದ ಜಿಎಸ್ ಟಿ ಸರಳ, ಶೇ.18ರಷ್ಚು ಮಾತ್ರ ತೆರಿಗೆ: ರಾಹುಲ್ ಗಾಂಧಿ
ಕಾಂಗ್ರೆಸ್ ಹೋರಾಟದ ಫಲವಾಗಿ ಜಿಎಸ್ ಟಿ ಮಂಡಳಿ 178 ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ ಎಂದಿರುವ....

Published On :
ನವದೆಹಲಿ: ಕಾಂಗ್ರೆಸ್ ಹೋರಾಟದ ಫಲವಾಗಿ ಜಿಎಸ್ ಟಿ ಮಂಡಳಿ 178 ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದೆ ಎಂದಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, 2019ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶೇ.18ರಷ್ಟು ಮಾತ್ರ ತೆರಿಗೆ ವಿಧಿಸಲಾಗುವುದು ಎಂದು ಶನಿವಾರ ಹೇಳಿದ್ದಾರೆ.
ಭಾರತಕ್ಕೆ ಗಬ್ಬರ್ ಸಿಂಗ್ ತೆರಿಗೆ ಬೇಕಾಗಿಲ್ಲ. ನಮಗೆ ನಿಜವಾದ ಜಿಎಸ್ ಟಿ ಬೇಕು. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಜಾರಿಗೆ ತಂದ ಜಿಎಸ್ ಟಿಯನ್ನು ರದ್ದುಗೊಳಿಸಿ, ಸರಳಗೊಳಿಸಲಾಗುವುದು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ನಾಲ್ಕನೇ ಬಾರಿಗೆ ಗುಜರಾತ್ ನಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಅವರು, ಜಿಎಸ್ ಟಿಯನ್ನು ಎಲ್ಲಾ ವಸ್ತುಗಳಿಗೂ ಶೇ.18 ಮಿತಿಗೊಳಿಸಲು ಕಾಂಗ್ರೆಸ್ ಹೋರಾಟ ಮುಂದುವರೆಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕು ಮುನ್ನ ಗುಜರಾತ್ ಗಾಂಧಿನಗರದಲ್ಲಿ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ, ಕೇವಲ ತೆರಿಗೆ ಕಡಿತಗೊಳಿಸಿದರೆ ಮಾತ್ರ ಹಳಿ ತಪ್ಪಿರುವ ಆರ್ಥ ವ್ಯವಸ್ಥೆ ದಾರಿಗೆ ಬರುವುದಿಲ್ಲ. ದೇಶದಲ್ಲಿ 5 ಬಗೆಯ ತೆರಿಗೆಗಳ ಬದಲಿಗೆ ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಬೇಕು. ಇದಕ್ಕಾಗಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ಆಗ್ರಹಿಸಿದ್ದರು.
ಅಂತೆಯೇ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ ವಿರುದ್ಧದ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಸರ್ಕಾರದ ಜಿಎಸ್ ಟಿ ಜಾರಿ ಪ್ರಕ್ರಿಯೆಯೇ ಸರಿಯಾಗಿರಲಿಲ್ಲ. ಜಿಎಸ್ ಟಿ ಜಾರಿ ಕುರಿತ ಸರ್ಕಾರದ ನಿರ್ಧಾರ ಸರಿ ಇರಲಿಲ್ಲ. ಬಹುಶಃ ಪ್ರಧಾನಿ ಮೋದಿಗೆ ಅವರ ತಪ್ಪು ಈಗ ಅರಿವಾದಂತಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


