ದೇಶ

ಅರುಣಾಚಲದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸುವಂತೆ ಇಸಿಗೆ ಕಾಂಗ್ರೆಸ್ ಒತ್ತಾಯ

ಅರುಣಾಚಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳಿಂದ ಖಾಲಿ ಉಳಿದಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೂಡಲೇ ಉಪ....

ಅರುಣಾಚಲದ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸುವಂತೆ ಇಸಿಗೆ ಕಾಂಗ್ರೆಸ್ ಒತ್ತಾಯ
ಸಾಂದರ್ಭಿಕ ಚಿತ್ರ
Published On :
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಕಳೆದ ಹಲವು ತಿಂಗಳಿಂದ ಖಾಲಿ ಉಳಿದಿರುವ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕೂಡಲೇ ಉಪ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಶನಿವಾರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.
ಕಳೆದ ಫೆಬ್ರವರಿಯಿಂದ ಖಾಲಿ ಇರುವ ಪೂರ್ವ ಕಮೆಂಗ್ ಜಿಲ್ಲೆಯ ಪಕ್ಕೆ-ಕೆಸಾಂಗ್ ವಿಧಾನಸಭಾ ಕ್ಷೇತ್ರ ಮತ್ತು ಲೋಯರ್ ಸಯಾಂಗ್ ಜಿಲ್ಲೆಯ ಲಿಕಾಬಲಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವಂತೆ ಅರುಣಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ತಕ್ಕಂ ಸಂಜೊಯ್ ಅವರು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅಚಲ್ ಕುಮಾರ್ ಜ್ಯೋತಿ ಅವರಿಗೆ ಪತ್ರ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಕಮೆಂಗ್ ದೋಲೋ ಅವರ ಸದಸ್ಯತ್ವ ಕಳೆದುಕೊಂಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ಕಳೆದ ಜುಲೈ 29ರಂದು ಉಪ ಚುನಾವಣೆ ಘೋಷಿಸಿತ್ತು. ಆದರೆ ಕೆಟ್ಟ ಹವಾಮಾನದ ಹಿನ್ನೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.