ದೇಶ

ವಿಜಯವಾಡ: ಬೋಟ್ ಮುಳುಗಿ 13 ಪ್ರಯಾಣಿಕರ ಸಾವು

ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 13 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಡ: ಬೋಟ್ ಮುಳುಗಿ 13 ಪ್ರಯಾಣಿಕರ ಸಾವು
ಬೋಟ್ ದುರಂತ
Published On :
ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 13 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. 35 ಪ್ರವಾಸಿಗರಿದ್ದ ಬೋಟ್ ಭವಾನಿ ಐಲ್ಯಾಂಡ್ ನಿಂದ ಪವಿತ್ರ ಸಂಗಮಕ್ಕೆ ಹೋಗುತ್ತಿದ್ದಾಗ ಮುಳುಗಿದ್ದು 13 ಪ್ರವಾಸಿಗರು ಜಲಸಮಾಧಿಯಾಗಿದ್ದು ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಸಾಂಭ ಶಿವ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.
ಬೋಟ್ ದುರಂತದ ಹಿನ್ನೆಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು 20 ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇನ್ನು ಹಲವು ಪ್ರಯಾಣಿಕರು ನಾಪತ್ತೆಯಾಗಿರುವ ಹಿನ್ನಲೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.