ಜಮ್ಮು ಮತ್ತು ಕಾಶ್ಮೀರ ನಮ್ಮದು, ಪಿಒಕೆ ಪಾಕಿಸ್ತಾನದ್ದು: ಫಾರೂಕ್ ಹೇಳಿಕೆಗೆ ರಿಷಿ ಕಪೂರ್ ಬೆಂಬಲ
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪಿಒಕೆ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

Published On :
ಶ್ರೀನಗರ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪಿಒಕೆ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಹೇಗೆ ಭಾರತದ ಅಂಗವೋ ಹಾಗೆಯೇ ಪಿಒಕೆ ಪಾಕಿಸ್ತಾನಕ್ಕೆ ಸೇರಿದೆ. ಸರ್ಕಾರ ಶಾಂತಿ ಬಯಸಿದ್ದೇ ಆದಲ್ಲಿ ಅದು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ನೀಡಿರುವ ವಿವಾದಾತ್ಮಕ ಹೇಳಿಕೆಗೆ ರಿಷಿ ಕಪೂರ್ ಬೆಂಬಲ ಸೂಚಿಸಿದ್ದಾರೆ.
ರಿಷಿ ಕಪೂರ್ ತಮ್ಮ ಟ್ವೀಟರ್ ನಲ್ಲಿ ಫಾರೂಕ್ ಅಬ್ದುಲ್ಲಾ ಜೀ ಸಲಾಂ! ನಿಮ್ಮ ಮಾತಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಜಮ್ಮು ಮತ್ತು ಕಾಶ್ಮೀರ ನಮ್ಮದು, ಪಿಒಕೆ ಅವರದ್ದು. ಈ ಮೂಲಕ ಮಾತ್ರ ನಾವು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಇದನ್ನು ನಾನು ಒಪ್ಪುತ್ತೇನೆ ಎಂದು ಟ್ವೀಟಿಸಿದ್ದಾರೆ.
ನಾನು ಸಾಯುವ ಮುನ್ನ ಒಮ್ಮೆ ಪಾಕಿಸ್ತಾನವನ್ನು ನೋಡಬಯಸುತ್ತೇನೆ. ನಾವು ಬಂದ ದಾರಿಯನ್ನು ನಮ್ಮ ಮಕ್ಕಳಿಗೂ ತೋರಿಸಲು ಇಚ್ಛಿಸುತ್ತೇನೆ. ಇದನ್ನು ನೆರವೇರಿಸಿಕೊಡಿ ಜೈ ಮಾತಾ ದಿ ಎಂದು ರಿಷಿ ಕಪೂರ್ ಟ್ವೀಟಿಸಿದ್ದು ಈ ಟ್ವೀಟ್ ಇದೀಗ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and KashmirPoKRishi KapoorFarooq Abdullahಫಾರೂಕ್ ಅಬ್ದುಲ್ಲಾರಿಷಿ ಕಪೂರ್ಪಿಒಕೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


