ಒಂದು ವೇಳೆ ತಪ್ಪಿತಸ್ಥ ಹಿಂದೂ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಿ: ರಾಜಸ್ತಾನ ಗೃಹಮಂತ್ರಿ
ಗೋರಕ್ಷಕರ ಹೆಸರಿನಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜಸ್ತಾನ ಗೃಹ ಸಚಿವ ಗುಲಾಬ್ ಚಂದ್ ಕಠಾರಿಯಾ,..

Published On :
ಜೈಪುರ: ಗೋರಕ್ಷಕರ ಹೆಸರಿನಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬನ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜಸ್ತಾನ ಗೃಹ ಸಚಿವ ಗುಲಾಬ್ ಚಂದ್ ಕಠಾರಿಯಾ, ಒಂದು ವೇಳೆ ತಪ್ಪಿತಸ್ಥ ಹಿಂದೂ ಆಗಿದ್ದರೂ ಅವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಪ್ರಾಥಮಿಕ ವರದಿ ಪ್ರಕಾರ ನಾಲ್ಕು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಹಿಂದೂ ಆಗಿರಲಿ ಅಥವಾ ಮುಸ್ಲಿಂ ಆಗಿರಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಠಾರಿಯಾ ಹೇಳಿದ್ದಾರೆ.
ಇದೇ ವೇಳೆ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿರುವುದಾಗಿ ಸಚಿವರು ತಿಳಿಸಿದ್ದಾರೆ. ಜೊತೆಗೆ ಮತ್ತೆ ಐವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಅವರು ಹೇಳಿದ್ದಾರೆ.
ಭಾನುವಾರ ರಾಜಸ್ತಾನದ ಆಳ್ವಾರ್ ನಲ್ಲಿ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದಾರೆ ಎಂಗು ಆರೋಪಿಸಿ ಮೂವರು ಮುಸ್ಲಿಂ ಯುವಕರನ್ನು ಥಳಿಸಲಾಗಿತ್ತು, ಅದರಲ್ಲಿ ಓರ್ವನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HinduRajasthanತಪ್ಪಿತಸ್ಥಹಿಂದೂರಾಜಸ್ತಾನCulpritAlwar lynchingಆಳ್ವಾರ್ ಹತ್ಯೆGulab Chand Katariaಲಾಬ್ ಚಂದ್ ಕಠಾರಿಯಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


