ದೇಶ

ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಗಾದಿ ಮತ್ತೆ ವಿಳಂಬ!

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಗಾದಿಗೇರಿಸುವ ಕಾರ್ಯಕ್ಕೆ ಮತ್ತೆ ತಡೆ ನೀಡಲಾಗಿದ್ದು, ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲೇ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.

ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಗಾದಿ ಮತ್ತೆ ವಿಳಂಬ!
ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Published On :
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷ ಗಾದಿಗೇರಿಸುವ ಕಾರ್ಯಕ್ಕೆ ಮತ್ತೆ ತಡೆ ನೀಡಲಾಗಿದ್ದು, ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲೇ ಚುನಾವಣೆ  ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಈ ಹಿಂದೆ ವರದಿಯಾದಂತೆ ನವೆಂಬರ್ ಅಂತ್ಯದಲ್ಲಿ ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಪಟ್ಟ ನೀಡಲು ನಿರ್ಧರಿಸಲಾಗಿತ್ತು. ಆದರೆ ಗುಜರಾತ್ ಚುನಾವಣೆ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲೇ ಚುನಾವಣೆ  ಎದುರಿಸಲು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತಾದರೂ, ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ  ಇರುವುದರಿಂದ ರಾಹುಲ್ ಗಾಂಧಿ ಅವರನ್ನು ಸಧ್ಯಕ್ಕೆ ಅಧ್ಯಕ್ಷ ಗಾದಿಗೇರಿಸಲು ಹಿಂದೇಟು ಹಾಕಲಾಗುತ್ತಿದೆ.
ಪ್ರಮುಖವಾಗಿ
 ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷದ ಮುಖಂಡರಲ್ಲೇ ಭಿನ್ನಾಭಿಪ್ರಾಯವಿರುವುದರಿಂದ ಗುಜರಾತ್ ಚುನಾವಣೆಯಲ್ಲಿ ಇದು ಪಕ್ಷಕ್ಕೆ ಮುಳುವಾಗುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ  ವ್ಯಕ್ತವಾಗಿದೆ. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಪಟ್ಟಾಭಿಷೇಕವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಆದರೆ ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ರಾಹುಲ್ ಗಾಂಧಿ ಅವರೇ ಗುಜರಾತ್ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯದಲ್ಲಿ ಮುಂಚೂಣಿಯಾಗಿರುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದೇ ನವೆಂಬರ್ 19ರಂದು  ಹಿಮಾಚಲ ಪ್ರದೇಶದಲ್ಲಿ 2ನೇ ಹಂತದ ಮತದಾನವಿದ್ದು, ಬಳಿಕ ಗುಜರಾತ್ ನಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಯಾವುದೇ ಅಪಾಯಕ್ಕೆ ಆಸ್ಪದ ನೀಡಲು ಕಾಂಗ್ರೆಸ್ ಪಕ್ಷ ಸಿದ್ಧವಿಲ್ಲ. ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ  ಕೂಡ ಇದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.