ದಕ್ಷಿಣ ಚೀನಾ ಸಮುದ್ರ ವಿವಾದ: ನಿಯಮ ಆಧಾರಿತ ಭದ್ರತಾ ವ್ಯವಸ್ಥೆಗೆ ಭಾರತದ ಬೆಂಬಲ: ಮೋದಿ
ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟಕ್ಕಾಗಿ ಪ್ರಾದೇಶಿಕ ಸಹಕಾರವನ್ನು ತೀವ್ರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಸಭೆಯಲ್ಲಿ ಕರೆ ನೀಡಿದ್ದಾರೆ.

Published On :
ಮನಿಲಾ: ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟಕ್ಕಾಗಿ ಪ್ರಾದೇಶಿಕ ಸಹಕಾರವನ್ನು ತೀವ್ರಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಸಭೆಯಲ್ಲಿ ಕರೆ ನೀಡಿದ್ದಾರೆ.
ಭಯೋತ್ಪಾದನೆ, ತೀವ್ರವಾದಿತ್ವ ಪ್ರಾದೇಶಿಕವಾಗಿ ಅತ್ಯಂತ ತುರ್ತಾಗಿ ನಿರ್ವಹಣೆ ಮಾಡಬೇಕಾದ ಸವಾಲುಗಳಾಗಿದ್ದು, ಎಲ್ಲಾ ರಾಷ್ಟ್ರಗಳೂ ಭಯೋತ್ಪಾದನೆಯ ವಿರುದ್ಧದ ಸಹಕಾರವನ್ನು ತೀವ್ರಗೊಳಿಸಬೇಕೆಂದು ಮೋದಿ ಹೇಳಿದ್ದಾರೆ. ಅಮೆರಿಕ, ಚೀನಾ, ಜಪಾನ್, ಆಸ್ಟ್ರೇಲಿಯಾ ರಾಷ್ಟ್ರಗಳು ಭಾಗಿಯಾಗಿದ್ದ ಇದೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಚೀನಾ ಸಮುದ್ರದ ವಿವಾದದ ಬಗ್ಗೆಯೂ ಮಾತನಾಡಿದ್ದು, ನಿಯಮ ಆಧಾರಿತ ಭದ್ರತಾ ವ್ಯವಸ್ಥೆಯನ್ನು ಭಾರತ ಬೆಂಬಲಿಸುತ್ತದೆ ಎಂದು ಆಸಿಯಾನ್ ರಾಷ್ಟ್ರಗಳ ಒಕ್ಕೂಟಕ್ಕೆ ಭರವಸೆ ನೀಡುವುದಾಗಿ ತಿಳಿಸಿದ್ದಾರೆ.
ಆಸಿಯಾನ್ ಸಭೆಯಲ್ಲಿ ಚರ್ಚೆಗೆ ಬರುವ ವಿಷಯಗಳ ಪೈಕಿ ಚೀನಾದ ದಕ್ಷಿಣ ಸಮುದ್ರ ವಿವಾದದ ವಿಷಯ ಪ್ರಾಮುಖ್ಯತೆ ಪಡೆದಿತ್ತು. ದಕ್ಷಿಣ ಚೀನಾ ಸಮುದ್ರದ ಪ್ರದೇಶ ತಮಗೂ ಸೇರಿದೆ ಎಂದು ವಿಯೆಟ್ನಾಂ, ಫಿಲಿಪೇನ್ಸ್ ರಾಷ್ಟ್ರಗಳು ಹೇಳುತ್ತಿದ್ದು, ಚೀನಾ ದಕ್ಷಿಣ ಚೀನಾ ಸಮುದ್ರದಲ್ಲಿ ನಿಯಮ ಉಲ್ಲಂಘಿಸಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


