ದೆಹಲಿಯಲ್ಲಿ ವಾಯು ಮಾಲಿನ್ಯ: ಹರಿಯಾಣ ಸಿಎಂ ಭೇಟಿ ಮಾಡಿದ ಕೇಜ್ರಿವಾಲ್
ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ವಾಯು ಮಾಲಿನ್ಯ ಮಿತಿ ಮೀರಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು.....

Published On :
ನವದೆಹಲಿ: ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿನ ವಾಯು ಮಾಲಿನ್ಯ ಮಿತಿ ಮೀರಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿದ್ದು, ಕೃಷಿ ತ್ಯಾಜ್ಯ ಸುಡುತ್ತಿರುವುದರ ಬಗ್ಗೆ ಮತ್ತು ಅಂತರ್ ರಾಜ್ಯ ಸಿಎನ್ ಜಿ ಬಸ್ ಸೇವೆ ಕುರಿತು ಚರ್ಚಿಸಿದ್ದಾರೆ.
ಖಟ್ಟರ್ ಭೇಟಿಯ ಬಳಿಕ ಉಭಯ ಜಂಟಿ ಸುದ್ದಿಗೋಷ್ಠಿ ಉದ್ದೇಶಿ ಮಾತನಾಡಿದ ಕೇಜ್ರಿವಾಲ್, ಮಾತುಕತೆ ಫಲಪ್ರದವಾಗಿದ್ದು, ವಾಯು ಮಾಲಿನ್ಯ ನಿಯಂತ್ರಣಕ್ಕೆ ಎಲ್ಲಾ ರೀತಿ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಹರಿಯಾಣದಲ್ಲಿ ಕೃಷಿ ತ್ಯಾಜ್ಯ ಸುಡುವುದರಿಂದ ಸ್ವಲ್ಪ ಪ್ರಮಾಣದ ವಾಯು ಮಾಲಿನ್ಯವಾಗುತ್ತಿದೆ. ಇದರೊಂದಿಗೆ ದೆಹಲಿ ಮತ್ತು ಹರಿಯಾಣ ನಡುವೆ ಸಿಎನ್ ಜಿ ಬಸ್ ಗಳನ್ನು ಓಡಿಸುವುದರ ಕುರಿತು ಖಟ್ಟರ್ ಅವರೊಂದಿಗೆ ಚರ್ಚಿಸಿರುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿ ವಾಯು ಮಾಲಿನ್ಯಕ್ಕೆ ಕೇವಲ ಒಂದು ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಹರಿಯಾಣ ಮತ್ತು ಪಂಜಾಬ್ ನಲ್ಲಿ ರೈತರು ಕೃಷಿ ತಾಜ್ಯವನ್ನು ಸುಡುತ್ತಿರುವುದು ಮಾಲಿನ್ಯ ಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣ ಎಂದು ದೆಹಲಿ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್ದೆಹಲಿArvind KejriwalDelhiManohar Lal KhattarAir pollutionವಾಯು ಮಾಲಿನ್ಯಮನೋಹರ್ ಲಾಲ್ ಖಟ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


