ರವಿಶಂಕರ್-ಆದಿತ್ಯನಾಥ್ ಭೇಟಿ; ಅಯೋಧ್ಯೆ ರಾಮಮಂದಿರದ ಬಗ್ಗೆ ಚರ್ಚೆ
ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಅವರು ನ.15 ರಂದು ಉತ್ತರ ಪ್ರದೇಶದ ಮುಖ್ಯಂಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಅಯೋಧ್ಯೆಯ ವಿವಾದದ ಬಗ್ಗೆ ಮಾತನಾಡಿದ್ದಾರೆ.

Published On :
ಲಖನೌ: ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಅವರು ನ.15 ರಂದು ಉತ್ತರ ಪ್ರದೇಶದ ಮುಖ್ಯಂಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಅಯೋಧ್ಯೆಯ ವಿವಾದದ ಬಗ್ಗೆ ಮಾತನಾಡಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ರವಿಶಂಕರ್ ಸುಮಾರು 30 ನಿಮಿಷಗಳ ಮಾತುಕತೆ ನಡೆಸಿದ್ದು, ಹಲವು ದಶಕಗಳಿಂದ ಬಗೆಹರಿಯದೇ ಉಳಿದಿರುವ ಸಮಸ್ಯೆಗೆ ತಾವು ಕಂಡುಕೊಂಡಿರುವ ’ಮಾತುಕತೆಯ ಪರಿಹಾರ’ವನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ಅಯೋಧ್ಯೆಯ ರಾಮಮಂದಿರ ವಿವಾದವನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವುದಕ್ಕೆ ರವಿಶಂಕರ್ ಉತ್ಸಾಹ ತೋರಿದ್ದು, ಮುಸ್ಲಿಂ ನಾಯಕರೊಂದಿಗೆ ಚರ್ಚೆ ನಡೆಸಲು ಉದ್ದೇಶಿಸಿದ್ದಾರೆ. ಇದೇ ವೇಳೆ ಅಯೋಧ್ಯೆಗೆ ತೆರಳಿ ಹಿಂದೂ ನಾಯಕರು, ರಾಮಮಂದಿರಕ್ಕೆ ಸಂಬಂಧಪಟ್ಟವರೊಂದಿಗೂ ರವಿಶಂಕರ್ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


