ಗುಜರಾತ್ ಬಿಜೆಪಿ ಚುನಾವಣಾ ಜಾಹೀರಾತಿನಲ್ಲಿ ರಾಹುಲ್ ಗಾಂಧಿ ಈಗ 'ಯುವರಾಜ'!
ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಜಾಹೀರಾತಿನಲ್ಲಿ `ಪಪ್ಪು’ ಎಂಬ ಪದವನ್ನು ಬಳಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 'ಯುವರಾಜ'......

Published On :
ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಜಾಹೀರಾತಿನಲ್ಲಿ `ಪಪ್ಪು’ ಎಂಬ ಪದವನ್ನು ಬಳಸದಂತೆ ಚುನಾವಣಾ ಆಯೋಗ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 'ಯುವರಾಜ' ಪದವನ್ನು ಬಳಸಲು ನಿರ್ಧರಿಸಿದೆ.
'ಯುವರಾಜ' ಎಂಬ ಪದ ಬಳಕೆ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ಕುರಿತಂತೆ ಗುಜರಾತ್ ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ ನಲ್ಲಿ ವಿಡಿಯೋವನ್ನು ಅಪ್ ಮಾಡಿದೆ.
ಈ ಮೊದಲು ಗುಜರಾತ್ ಬಿಜೆಪಿ ತನ್ನ ಸಾಮಾಜಿಕ ಜಾಲತಾಣದ ಜಾಹೀರಾತುಗಳಲ್ಲಿ ಪಪ್ಪು ಎಂದು ಬಳಸಿತ್ತು ಚುನಾವಣಾ ಆಯೋಗ, ಪಪ್ಪು ಪದ ಅಗೌರವವನ್ನು ತೋರಿಸುತ್ತದೆ ಇದನ್ನು ಬಳಸಬಾರದೆಂದು ಆದೇಶಿಸಿತ್ತು.
ಯಾವುದೇ ಚುನಾವಣಾ ಜಾಹೀರಾತಿನ ಸ್ಕ್ರಿಪ್ಟ್ ನ್ನು ಚುಒಂದು ತಿಂಗಳ ಮುಂಚಿತವಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯೋಗ ಅದನ್ನು ಪರಿಶೀಲಿಸಿ ಅನುಮತಿ ನೀಡಿದ ಬಳಿಕವಷ್ಟೇ ಅದನ್ನು ಸಾರ್ವಜನಿಕವಾಗಿ ಬಳಸಬಹುದು ಎನ್ನುವ ನಿಯಮ ಜಾರಿಯಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Election Commissionಚುನಾವಣಾ ಆಯೋಗಭಾರತೀಯ ಜನತಾ ಪಕ್ಷBharatiya Janata Party (BJP)Gujarat electionCongress vice president Rahul Gandhiಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿYuvraj
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


