ದೇಶ

'ಹಿಂದೂ ಭಯೋತ್ಪಾದನೆ': ಕಮಲ್ ವಿರುದ್ಧ ಎಫ್‌ಐಆರ್‌ಗೆ ಸೂಚಿಸುವಂತೆ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ

ಹಿಂದೂ ಭಯೋತ್ಪಾದನೆ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಬೇಕು ಎಂದು ಮದ್ರಾಸ್ ಹೈಕೋರ್ಟ್...

'ಹಿಂದೂ ಭಯೋತ್ಪಾದನೆ': ಕಮಲ್ ವಿರುದ್ಧ ಎಫ್‌ಐಆರ್‌ಗೆ ಸೂಚಿಸುವಂತೆ ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ
ಕಮಲ್ ಹಾಸನ್
Published On :
ಚೆನ್ನೈ: ಹಿಂದೂ ಭಯೋತ್ಪಾದನೆ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿತ್ತು. 
ಈ ಅರ್ಜಿ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಎಸ್ ರಮೇಶ್ ಅವರು ಸರ್ಕಾರಿ ವಕೀಲರಿಗೆ ಈ ಪ್ರಕರಣದ ಕುರಿತಂತೆ ಪೊಲೀಸ್ ಅಧಿಕಾರಿಗಳಿಂದ ಸೂಚನೆಗಳನ್ನು ಪಡೆಯುಲು ನಿರ್ದೇಶಿಸಿದ್ದು ಜತೆಗೆ ಮುಂದಿನ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದರು. 
ಅರ್ಜಿದಾರ ಜಿ ದೇವರಾಜನ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಕಮಲ್ ಹಾಸನ್ ಹಿಂದೂ ಭಯೋತ್ಪಾದನೆ ಹೇಳಿಕೆಯನ್ನು ತಮಿಳು ನಿಯತಕಾಲಿಕೆಯೊಂದು ಪ್ರಕಟಿಸಿತ್ತು. ಇದನ್ನು ಆಧಾರವಾಗಿಟ್ಟುಕೊಂಡು ಕಮಲ್ ಹಾಸನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಬೇಕು ಎಂದು ಮನವಿ ಮಾಡಿದ್ದರು. 
ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಕಮಲ್ ಹಾಸನ್ ಹಿಂದೂಗಳನ್ನು ಭಯೋತ್ಪಾದಕರು ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಧರ್ಮವು ಹಿಂಸಾಚಾರವನ್ನಲ್ಲ, ಶಾಂತಿಯನ್ನು ಮಾತ್ರವಲ್ಲ ಬೋದಿಸುತ್ತವೆ ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು. ಧರ್ಮದ ಆಧಾರದ ಮೇಲೆ ತಮಿಳು ಸಮುದಾಯವನ್ನು ವಿಭಜಿಸಲು ಕಮಲ್ ಹಾಸನ್ ಯತ್ನಿಸುತ್ತಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.