ಇಂಡೋ-ಚೀನಾ ಗಡಿಯಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲು
ಭಾರತ-ಚೀನಾ ಗಡಿ ಭಾಗದಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

Published On :
ನವದೆಹಲಿ: ಭಾರತ-ಚೀನಾ ಗಡಿ ಭಾಗದಲ್ಲಿ ಶನಿವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.
ಚೀನಾ-ಭಾರತ ಗಡಿ ಪ್ರದೇಶವಾದ ಟಿಬೆಟ್ ನಲ್ಲಿ ಭೂಕಂಪನ ಸಂಭವಿಸಿದ್ದು, ಟಿಬೆಟ್ ನ ನ್ಯಿಂಗ್ ಚಿ ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ಅರುಣಾಚಲ ಪ್ರದೇಶದಲ್ಲೂ ಕಂಪನದ ಅನುಭವವಾಗಿದ್ದು, 2 ಬಾರಿ ಭೂಮಿ ಕಂಪಿಸಿದೆ ಎಂದು ಹೇಳಲಾಗಿದೆ.ಆದರೆ ಭೂಕಂಪನದಲ್ಲಿ ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಇರಾನ್ ನಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿ 530 ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


