ಗುಜರಾತ್ ಚುನಾವಣೆಯಲ್ಲಿ ಎನ್ ಸಿಪಿ ಕಾಂಗ್ರೆಸ್ ಗೆ ಸಂಪೂರ್ಣ ಬೆಂಬಲ ನೀಡಲಿದೆ: ತಾರಿಖ್ ಅನ್ವರ್
ಗುಜರಾತಿನಲ್ಲಿ 22 ವರ್ಷದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಲಿಕ್ಕಾಗಿ ಮುಂದಿನ ತಿಂಗಳು ನದೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಕಾಂಗ್ರೆಸ್ ಗೆ......

Published On :
ಕಾಟಿಹರ್: ಗುಜರಾತಿನಲ್ಲಿ 22 ವರ್ಷದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಲಿಕ್ಕಾಗಿ ಮುಂದಿನ ತಿಂಗಳು ನದೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಕಾಂಗ್ರೆಸ್ ಗೆ ಬೆಂಬಲ ನೀಡಲಿದೆ ಎಂದು ಹೇಳಿದೆ.
ಎನ್ ಸಿಪಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಮಾತನಾಡುತ್ತಾ, "ಈ ವಿಧಾನಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರದ ಸಾಧನೆಯ ಬಗ್ಗೆ ಜನರ ಭಾವನೆಗಳನ್ನು ಮತ್ತು ಗ್ರಹಿಕೆಯನ್ನು ತೋರಿಸುತ್ತದೆ" ಎಂದರು. "ಎನ್ ಸಿಪಿ ತನ್ನ ಸಂಪೂರ್ಣ ಬೆಂಬಲವನ್ನು ಕಾಂಗ್ರೆಸ್ ಗೆ ನೀಡುತ್ತದೆ ಮತ್ತು ಕಾಂಗ್ರೆಸ್ ನೊಂದಿಗೆ ಮೈತ್ರಿಕೂಟ ರಚಿಸಿಕೊಂಡು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ'' ಎಂದು ಅವರು ತಮ್ಮ ಲೋಕಸಭಾ ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
"ಗುಜರಾತ್ ಜನತೆ ಬಿಜೆಪಿ ಸರ್ಕಾರದ ಬಗ್ಗೆ 22 ವರ್ಷಗಳಲ್ಲಿ ಮೊದಲ ಬಾರಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಅವರು ಬದಲಾವಣೆ ಬಯಸುತ್ತಾರೆ" ಎಂದು ಅವರು ಹೇಳಿದರು.
ಗುಜರಾತ್ ವಿಧಾನಸಭೆಗೆ ಬರುವ ಡಿಸೆಂಬರ್ 9 ಮತ್ತು 14 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿTariq AnwarGujarat Assembly electionಗುಜರಾತ್ ಅಸೆಂಬ್ಲಿ ಚುನಾವಣೆNationalist Congress Party(NCP)ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ ಸಿಪಿ)ತಾರಿಖ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


