ಫಾರೂಖ್ ಅಬ್ದುಲ್ಲಾ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ: ಬಿಜೆಪಿ
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ವಿರುದ್ಧ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

Published On :
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ವಿರುದ್ಧ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ದೇಶವನ್ನು ಕೋಮುವಾದದೆಡೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.
ಎಎನ್ಐ ನೊಂದಿಗೆ ಮಾತನಾಡಿರುವ ಬಿಜೆಪಿ ಮುಖಂಡ ಗೋಪಾಲ ಕೃಷ್ಣ ಅಗರ್ವಾಲ್, ಫಾರೂಖ್ ಅಬ್ದುಲ್ಲಾ ಓರ್ವ ಸಂಸದರಾಗಿದ್ದು ಸಂಸದೀಯ ಕಾನೂನಿನ ಪ್ರಕಾರ ಹೇಳಿಕೆ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.
ಫಾರೂಖ್ ಅಬ್ದುಲ್ಲಾ ಯಾವ ಚಿಂತನೆ ಹೊಂದಿದ್ದಾರೆ, ಯಾವ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂಬುದನ್ನು ಅರಿಯಲು ಸಾಧ್ಯವಾಗುತ್ತಿಲ್ಲ. ಅವರು ದೇಶವನ್ನು ಕೋಮುವಾದದೆಡೆಗೆ ತಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಕ್ಕೂ ಮುನ್ನ ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಫಾರೂಖ್ ಅಬ್ದುಲ್ಲಾ ಬಿಜೆಪಿ ದೇಶವನ್ನು ಧರ್ಮದ ಆಧಾರದಲ್ಲಿ ಒಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


