ಗುಜರಾತ್ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್ ಅಧ್ಯಕ್ಷ!
ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಗುಜರಾತ್ ನ ಕಾಂಗ್ರೆಸ್ ಅಧ್ಯಕ್ಷ ಭರತ್ ಸಿನ್ಹ ಸೋಲಂಕಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

Published On :
ಅಹ್ಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, ಗುಜರಾತ್ ನ ಕಾಂಗ್ರೆಸ್ ಅಧ್ಯಕ್ಷ ಭರತ್ ಸಿನ್ಹ ಸೋಲಂಕಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಪಕ್ಷದೊಂದಿಗೆ ಭಿನ್ನಾಭಿಪ್ರಾಯ ಇರುವುದನ್ನು ನಿರಾಕರಿಸಿರುವ ಸೋಲಂಕಿ ಈ ಹಿಂದೆಯೇ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದ್ದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸೋಲಂಕಿ ಅವರು ಸ್ಪರ್ಧೆಯಿಂದ ಹಿಂದೆ ಸರಿದಿರುವುದು ಮಹತ್ವ ಪಡೆದುಕೊಂಡಿತ್ತು.
ಆದರೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸೋಲಂಕಿ, ತಾವು ಚುನಾವಣೆಗೆ ಸ್ಪರ್ಧಿಸದೇ ಇರುವ ನಿರ್ಧಾರವನ್ನು ಈಗ ಪ್ರಕಟಿಸುತ್ತಿಲ್ಲ, ಈ ಹಿಂದೆಯೇ ತಮ್ಮ ನಿರ್ಧಾರವನ್ನು ತಿಳಿಸಿದ್ದಾಗಿ ಹೇಳಿದ್ದಾರೆ. 182 ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ 106 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಾಂಗ್ರೆಸ್ ಪಕ್ಷGujarat electionsಗುಜರಾತ್ ಚುನಾವಣೆCongress Party ChiefBharatsinh Solankiಭರತ್ ಸಿನ್ಹ ಸೋಲಂಕಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


