ದೇಶ

ಜಮ್ಮು ಮತ್ತು ಕಾಶ್ಮೀರ: 3 ಭಯೋತ್ಪಾದಕರನ್ನು ಬಂಧಿಸಿದ ಜಮ್ಮು ಪೊಲೀಸರು

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಲ್ಲಿ ಜಮ್ಮು ಪೊಲೀಸರು ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ...

ಜಮ್ಮು ಮತ್ತು ಕಾಶ್ಮೀರ: 3 ಭಯೋತ್ಪಾದಕರನ್ನು ಬಂಧಿಸಿದ ಜಮ್ಮು ಪೊಲೀಸರು
ಜಮ್ಮು ಮತ್ತು ಕಾಶ್ಮೀರ ಪೊಲೀಸರು
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಲ್ಲಿ ಜಮ್ಮು ಪೊಲೀಸರು ಮೂವರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬುದ್ದಗಾಮ್ ನಲ್ಲಿ ಶಸ್ತ್ರ ಸರ್ಜಿತ ಮೂವರು ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದು ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಉಗ್ರರಿಂದ ಒಂದು ಎಸ್ಎಲ್ಆರ್, ಒಂದು ಪಿಸ್ತೂಲ್ ಮತ್ತು ಗ್ರೈನೇಡ್ ಗಳನ್ನು ವಶಪಡಿಸಿಕೊಂಡಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಆಪರೇಷನ್ ಆಲ್ ಔಟ್ ಕಾರ್ಯಾಚರಣೆ ಕೈಗೊಂಡಿದ್ದು ಇದರ ಬೆನ್ನಲ್ಲೇ ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಕಡಿಮೆಯಾಗುತ್ತಿದೆ. ಇನ್ನು ಶಸ್ತ್ರಾಸ್ತ್ರವನ್ನು ಕೈಗೆತ್ತಿಕೊಂಡಿದ್ದ ಉಗ್ರರು ಸಹ ಶಸ್ತ್ರಾಸ್ತ್ರವನ್ನು ಬದಿಗಿತ್ತು ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಪೊಲೀಸರು ಮೂವರು ಉಗ್ರರನ್ನು ಬಂಧಿಸಿರುವುದು ಭಯೋತ್ಪಾದಕರ ನಿಗ್ರಹಕ್ಕೆ ಮಹತ್ವ ಹೆಜ್ಜೆ ಇಟ್ಟಂತಾಗಿದೆ. 
ನಿನ್ನೆ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಎಲ್ಇಟಿ ಉಗ್ರ ಸಂಘಟನೆಗೆ ಸೇರಿದ 6 ಮಂದಿ ಉಗ್ರರನ್ನು ಹತ್ಯೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.