ಲವ್ ಜಿಹಾದ್ ವಿರುದ್ಧದ ಜಾಗೃತಿ ಕಾರ್ಯಕ್ರಮಕ್ಕೆ ಯುವತಿಯರನ್ನು ಕಳಿಸುತ್ತಿರುವ ರಾಜಸ್ಥಾನ ಸರ್ಕಾರಿ ಶಾಲೆಗಳು!
ಲವ್ ಜಿಹಾದ್ ಕುರಿತು ತಿಳಿದುಕೊಳ್ಳುವ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ರಾಜಸ್ಥಾನ ಸರ್ಕಾರ ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರಿಕ್ಗೆ ಸೂಚನೆ ನೀಡಿದೆ.

Published On :
ರಾಜಸ್ಥಾನ: ಲವ್ ಜಿಹಾದ್ ಕುರಿತು ತಿಳಿದುಕೊಳ್ಳುವ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ರಾಜಸ್ಥಾನ ಸರ್ಕಾರ ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರಿಕ್ಗೆ ಸೂಚನೆ ನೀಡಿದೆ.
ಆರ್ ಎಸ್ಎಸ್ ನ ಅಂಗ ಸಂಸ್ಥೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಲವ್ ಜಿಹಾದ್ ಹಾಗೂ ಕ್ರೈಸ್ತ ಮಿಷನರಿಗಳ ತಂತ್ರಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಕಾರ್ಯಕ್ರಮದ ಕುರಿತ ಕರಪತ್ರಗಳನ್ನು ಹಂಚಲಾಗುತ್ತಿದ್ದು, ಲವ್ ಜಿಹಾದ್: ಹಿಂದೂ ಯುವತಿಯರೇ ಎಚ್ಚರದಿಂದ ಇರಿ ಎಂದು ಶೀರ್ಷಿಕೆ ನೀಡಲಾಗಿದೆ.
ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಸಿ ಮತಾಂತರಿಸಿ ಲವ್ ಜಿಹಾದ್ ನಡೆಸುತ್ತಿದ್ದಾರೆ ಎಂದು ಕರಪತ್ರದಲ್ಲಿ ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


