ಪದ್ಮಾವತಿ ವಿವಾದ: 'ಆಕ್ಷೇಪಾರ್ಹ' ದಶ್ಯಕ್ಕೆ ಕತ್ತರಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮ 'ಪದ್ಮಾವತಿ' ಚಿತ್ರದ ಆಕ್ಷೇಪಾರ್ಹ....
Published On :
ನವದೆಹಲಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮ 'ಪದ್ಮಾವತಿ' ಚಿತ್ರದ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ವಕೀಲ ಎಂಎಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಪದ್ಮಾವತಿ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್‌ಸಿ) ಇನ್ನು ಅನುಮತಿಯೇ ನೀಡಿಲ್ಲ. ಹೀಗಾಗಿ ನಾವು ಈಗ ಮಧ್ಯ ಪ್ರವೇಶಿಸಿದರೆ ಪೂರ್ವ-ನಿರ್ಧರಿತವಾಗುತ್ತದೆ ಎಂದು ಹೇಳಿ ಅರ್ಜಯನ್ನು ವಜಾಗೊಳಿಸಿದ್ದಾರೆ.
ಸಿಬಿಎಫ್‌ಸಿ ಅನುಮತಿ ನೀಡದಿದ್ದರೂ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ರಾಣಿ ಪದ್ಮಾವತಿಯ ಅವಹೇಳನ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಹಾಕುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಎಂ ಎಲ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

