ದೇಶ

ಅಯೋಧ್ಯೆಯಲ್ಲಿ ರಾಮಮಂದಿರ, ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಬಹುದು: ಶಿಯಾ ಸಮಿತಿ

ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ವಿಶೇಷ ಸಲಹೆಯೊಂದನ್ನು ನೀಡಿದ್ದು, ಅದರಂತೆ ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಲಖನೌನಲ್ಲಿ ಮಸೀದಿಯನ್ನು ನಿರ್ಮಾಣ ಮಾಡಬಹುದು ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ, ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಬಹುದು: ಶಿಯಾ ಸಮಿತಿ
ಸಂಗ್ರಹ ಚಿತ್ರ
Published On :
ಲಖನೌ: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ವಿಶೇಷ ಸಲಹೆಯೊಂದನ್ನು ನೀಡಿದ್ದು, ಅದರಂತೆ ಅಯೋಧ್ಯೆಯಲ್ಲಿ  ರಾಮಮಂದಿರ ಮತ್ತು ಲಖನೌನಲ್ಲಿ ಮಸೀದಿಯನ್ನು ನಿರ್ಮಾಣ ಮಾಡಬಹುದು ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ಸೈಯದ್ ವಸೀಂ ರಿಝ್ವಿ ಇಂತಹುದೊಂದು ಸಲಹೆ ನೀಡಿದ್ದು, ಇದರಿಂದ ವಿವಾದ ಇತ್ಯರ್ಥ ಸಾಧ್ಯ ಎಂದು ಹೇಳಿದ್ದಾರೆ. ಈ ಸಂಬಂಧ ತಾವು ಈಗಾಗಲೇ ಸಾಕಷ್ಟು ಧಾರ್ಮಿಕ  ಮುಖಂಡರೊಂದಿಗೆ ಚರ್ಚಿಸಿದ್ದು, ಅವರು ಕೂಡ ತಮ್ಮ ಈ ಸಲಹೆಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆಯೋಧ್ಯೆ ವಿವಾದ ಶಾಂತಿ ಮತ್ತು ಸೌಹಾರ್ಧಯುತವಾಗಿ ಅಂತ್ಯಕಾಣಬೇಕು ಎಂಬ ಉದ್ದೇಶದಿಂದ ತಾವು ಈ ಹಿಂದೆ  ಸಾಕಷ್ಟು ಧಾರ್ಮಿಕ ಮುಖಂಡರೊಂದಿಗೆ ತಮ್ಮ ಈ ಸಲಹೆ ಕುರಿತು ಚರ್ಚಿಸಲಾಗಿತ್ತು ಎಂದು ಹೇಳಿದ್ದಾರೆ. 
ಅಂತೆಯೇ ಇದೇ ಡಿಸೆಂಬರ್ 5ರಂದು ಇದೇ ಸಲಹೆಯನ್ನು ಸುಪ್ರೀಂ ಕೋರ್ಟ್ ಗೂ ಸಲ್ಲಿಸುವ ಕುರಿತು ಅಯೋಧ್ಯೆಯಲ್ಲಿರುವ ಮಹಾಂತರೊಂದಿಗೆ ಚರ್ಚಿಸುತ್ತಿರುವುದಾಗಿ ರಿಝ್ವಿ ಹೇಳಿದ್ದಾರೆ. ಇತ್ತೀಚೆಗೆ ತಾವು ದಾಮೋದರ ದಾಸ್  ಮಹಾಂತರು ಸೇರಿದಂತೆ ವಿವಿಧ ಹಿಂಧೂ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ವಿವಾದ ಶಾಂತಿಯುತವಾಗಿ ಮತ್ತು ಸೌಹಾರ್ಧಯುತವಾಗಿ ಈಡೇರಬೇಕು ಎಂಬುದು ನಮ್ಮ ಉದ್ದೇಶ ಎಂದು ರಿಜ್ವಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.