ಪ್ರಧಾನಿ ಮೋದಿ, ಇವಾಂಕ ಟ್ರಂಪ್ ಭಾಗವಹಿಸುವ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರಲು ದೀಪಿಕಾ ನಿರ್ಧಾರ
ಪದ್ಮಾವತಿ ಚಿತ್ರ ವಿವಾದದ ಕೇಂದ್ರ ಬಿಂದುವಾಗಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ...

Published On :
ನವದೆಹಲಿ: ಪದ್ಮಾವತಿ ಚಿತ್ರ ವಿವಾದದ ಕೇಂದ್ರ ಬಿಂದುವಾಗಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹೈದರಾಬಾದ್ ನಲ್ಲಿ ಈ ತಿಂಗಳ 28ರಿಂದ ನಡೆಯಲಿರುವ ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.
ಈ ಶೃಂಗಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಿಂದ ದೀಪಿಕಾ ಹಿಂದೆ ಸರಿದಿದ್ದಾರೆ ಎಂದು ತೆಲಂಗಾಣ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೊದಲು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ದೀಪಿಕಾ ತಿಳಿಸಿದ್ದರು. ಆದರೆ ಇದೀಗ ತಮ್ಮ ಭಾಗವಹಿಸುವಿಕೆ ನಿರ್ಧಾರದಿಂದ ಹಿಂದೆ ಸರಿದಿದ್ದು ಇದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.
ಶೃಂಗಸಭೆಯ ಅಧಿವೇಶನದಲ್ಲಿ ಹಾಲಿವುಡ್ ಟು ನಾಲಿವುಡ್ ಟು ಬಾಲಿವುಡ್ :ದಿ ಪಾತ್ ಟು ಮೂವಿಮೇಕಿಂಗ್ ಎಂಬ ವಿಷಯದ ಬಗ್ಗೆ ಮಾತನಾಡುವವರಲ್ಲಿ ದೀಪಿಕಾ ಒಬ್ಬರಾಗಿದ್ದರು. ನೈಜೀರಿಯಾದ ಚಿತ್ರೋದ್ಯಮಕ್ಕೆ ನಾಲಿವುಡ್ ಎಂದು ಕರೆಯಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್Narendra Modiನರೇಂದ್ರ ಮೋದಿDeepika Padukoneದೀಪಿಕಾ ಪಡುಕೋಣೆGlobal Entrepreneurship SummitIvanka Trumpಇವಾಂಕಾ ಟ್ರಂಪ್ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


