ಹೈದರಾಬಾದ್: ಇವಾಂಕ ಟ್ರಂಪ್ ಭೋಜನಕ್ಕೆ ಸಿದ್ಧಗೊಂಡಿದೆ 101 ಸೀಟಿನ ಡೈನಿಂಗ್ ಟೇಬಲ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಮತ್ತು ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ನವೆಂಬರ್ 28ರಿಂದ....

Published On :
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಮತ್ತು ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ನವೆಂಬರ್ 28ರಿಂದ ಹೈದರಾಬಾದ್ ನಲ್ಲಿ ನಡೆಯು ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ನ ಫಲಕನಾಮ ಅರಮನೆ ಸುತ್ತ ಪೊಲೀಸರು ಬಿಗಿ ಭದ್ರತೆ ಒದಗಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸಿದ್ದಾರೆ.
ಅಮೆರಿಕ ಅಧ್ಯಕ್ಷರ ಪುತ್ರಿ ಇವಾಂಕ ಅವರು ಜಾಗತಿಕ ವಾಣಿಜ್ಯೋದ್ಯಮ ಶೃಂಗಸಭೆಯ ನಂತರ ತಾಜ್ ಫಲಕನಾಮ ಅರಮನೆಯಲ್ಲಿ 101 ಜನ ಕುಳಿತು ಊಟ ಮಾಡಬಹುದಾದ ವಿಶ್ವದ ಅತಿ ದೊಡ್ಡ ಡೈನಿಂಗ್ ಟೇಬಲ್ ನಲ್ಲಿ ವಿಶ್ವದ ಗಣ್ಯರೊಂದಿಗೆ ಭೋಜನ ಸವಿಯಲಿದ್ದಾರೆ.
ನವೆಂಬರ್ 28ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಇವಾಂಕ್ ಟ್ರಂಪ್ ಅವರು ಫಲಕನಾಮ ಅರಮನೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸರು ಮತ್ತು ದಕ್ಷಿಣ ವಲಯ ಪೊಲೀಸರು ಬಿಗಿ ಭದ್ರತೆ ಒದಗಿಸಲು ಸಿದ್ಧವಾಗಿದ್ದಾರೆ ಎಂದು ದಕ್ಷಿಣ ವಲಯ ಡಿಸಿಪಿ ವಿ ಸತ್ಯನಾರಾಯಣ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


