ಪದ್ಮಾವತಿ ವಿವಾದ; ಸಿಬಿಎಫ್ ಸಿ ತನ್ನ ಕೆಲಸ ಮಾಡಲು ಬಿಡಿ: ಪ್ರಸಾರ ಸಚಿವಾಲಯ
ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ'ಗೆ ದಿನದಿಂದ ದಿನಕ್ಕೆ ವಿರೋಧ....

Published On :
ನವದೆಹಲಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ'ಗೆ ದಿನದಿಂದ ದಿನಕ್ಕೆ ವಿರೋಧ ಹೆಚ್ಚಾಗುತ್ತಿದ್ದು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್ ಸಿ) ತನ್ನ ಕೆಲಸ ಮಾಡಲು ಬಿಡಿ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಂಗಳವಾರ ಹೇಳಿದೆ.
ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ರಾಜವರ್ಧನ್ ಸಿಂಗ್ ಸಿಂಗ್ ರಾಥೋರ್ ಅವರು, ಸಿಬಿಎಫ್ ಸಿ ಕೆಲವು ಜವಾಬ್ದಾರಿಗಳನ್ನು ನೀಡಲಾಗಿದೆ. ಅದು ಕೆಲಸ ಮಾಡಲು ಅವಕಾಶ ಕೊಡಿ ಎಂದಿದ್ದಾರೆ.
ಚಿತ್ರಕ್ಕೆ ಸಿಬಿಎಫ್ ಸಿ ಪ್ರಮಾಣ ಪತ್ರ ನೀಡುವ ಮೊದಲೆ ಪದ್ಮಾವತಿ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಮಧ್ಯ ಪ್ರದೇಶ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿದೆ.
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹೀದ್ ಕಪೂರ್ ಅಭಿನಯದ 'ಪದ್ಮಾವತಿ' ಚಿತ್ರ ರಜಪೂತರ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದಲ್ಲಿ ರಾಣಿ ಪದ್ಮಿನಿಯ ಇತಿಹಾಸವನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜಕೀಯ ರಂಗು ಪಡೆಯುತ್ತಿರುವ ಈ ಚಿತ್ರದ ವಿರುದ್ಧ ಪ್ರತಿಭಟನೆಗಳು ಶುರುವಾಗಿದ್ದು, ಪದ್ಮಾವತಿ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


