'ಪದ್ಮಾವತಿ'ಗೆ ಸಿಎಂ ಸಿದ್ದು ಬೆಂಬಲ, ಬಿಜೆಪಿ ವಿರುದ್ಧ ಆಕ್ರೋಶ
ಭಾರಿ ವಿವಾದಕ್ಕೆ ಕಾರಣವಾಗಿರುವ ಪದ್ಮಾವತಿ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ಸೂಚಿಸಿದ್ದು, ನಟಿ ದೀಪಿಕಾ ಪಡುಕೋಣೆ ಅವರ ತಲೆ ಕಡಿದರೆ ಇನಾಮು ನೀಡುವ ಬಿಜೆಪಿ ನಾಯಕರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.

Published On :
ಬೆಂಗಳೂರು: ಭಾರಿ ವಿವಾದಕ್ಕೆ ಕಾರಣವಾಗಿರುವ ಪದ್ಮಾವತಿ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷ ಬೆಂಬಲ ಸೂಚಿಸಿದ್ದು, ನಟಿ ದೀಪಿಕಾ ಪಡುಕೋಣೆ ಅವರ ತಲೆ ಕಡಿದರೆ ಇನಾಮು ನೀಡುವ ಬಿಜೆಪಿ ನಾಯಕರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರ ಅಸಹಿಷ್ಣುತೆ ಹಾಗೂ ದ್ವೇಷವನ್ನು ಕಟುವಾಗಿ ಖಂಡಿಸುತ್ತೇನೆ. ದೀಪಿಕಾ ಪಡುಕೋಣೆ ಕರ್ನಾಟಕದ ಮನೆ ಮಗಳಾಗಿದ್ದು, ಅವರೊಂದಿಗೆ ರಾಜ್ಯ ಸರ್ಕಾರವಿದೆ. ನಟಿ ದೀಪಿಕಾ ಪಡುಕೋಣೆ ಮೇಲೆ ಹಲ್ಲೆ ನಡೆಸಲು ಮತ್ತು ಅವರ ತಲೆ ಕಡಿಯಲು ಇನಾಮು ನೀಡುವ ಹೇಳಿಕೆ ನೀಡಿರುವ ಬಿಜೆಪಿ ಮುಖಂಡರ ವಿರುದ್ಧ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಆಗ್ರಹಿಸಿದ್ದಾರೆ.
ಪಂಜಾಬ್ ಸಿಎಂ ಅಮರಿಂದರ್, ಮಧ್ಯ ಪ್ರದೇಶ ಸಿಎಂ ಚೌಹಾಣ್ ರಿಂದಲೂ ಪದ್ಮಾವತಿಗೆ ವಿರೋಧ!
ಇನ್ನು ಇದೇ ವೇಳೆ ಕೇವಲ ಬಿಜೆಪಿ ನಾಯಕರು ಮಾತ್ರವಲ್ಲದೇ ಪಂಜಾಬ್ ಮತ್ತು ಮಧ್ಯ ಪ್ರದೇಶ ರಾಜ್ಯ ಸರ್ಕಾರಗಳಿಂದಲೂ ಪದ್ಮಾವತಿ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಪದ್ಮಾವತಿ ಚಿತ್ರ ನಿಷೇಧಿಸಬೇಕು ಎಂಬ ಕೂಗಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ದನಿಗೂಡಿಸಿದ್ದಾರೆ. ಚಿತ್ರ ವಿರೋಧಿಸಿ ದೇಶದ ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಇಬ್ಬರೂ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಂಜಾಬ್ ಹೊರತು ಪಡಿಸಿ ಪದ್ಮಾವತಿಗೆ ಬಿಜೆಪಿಯೇತರ ಸರ್ಕಾರಗಳಿಂದ ಬೆಂಬಲ
ಏತನ್ಮಧ್ಯೆ ಪಂಜಾಬ್ ಸರ್ಕಾರವನ್ನು ಹೊರತು ಪಡಿಸಿ ಪದ್ಮಾವತಿ ಚಿತ್ರಕ್ಕೆ ಬಿಜೆಪಿಯೇತರ ಸರ್ಕಾರಗಳು ಬೆಂಬಲ ವ್ಯಕ್ತಪಡಿಸಿದ್ದು, ಕೇರಳ, ಪಶ್ಚಿಮ ಬಂಗಾಳ ಮತ್ತು ಕರ್ನಾಟಕ ಸರ್ಕಾರಗಳು ಪದ್ಮಾವತಿ ಚಿತ್ರದ ವಿರುದ್ಧ ಪ್ರತಿಭಟನೆಯನ್ನು ಖಂಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


