ಮಧ್ಯಪ್ರದೇಶದ ನಂತರ ಗುಜರಾತ್ ನಲ್ಲೂ ಪದ್ಮಾವತಿಗೆ ನಿಷೇಧ
ಪದ್ಮಾವತಿ ಚಿತ್ರದ ಪ್ರದರ್ಶನವನ್ನು ಗುಜರಾತ್ ನಲ್ಲಿ ನಿಷೇಧ ವಿಧಿಸುವುದಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.

Published On :
ಅಹಮದಾಬಾದ್: ಪದ್ಮಾವತಿ ಚಿತ್ರದ ಪ್ರದರ್ಶನವನ್ನು ಗುಜರಾತ್ ನಲ್ಲಿ ನಿಷೇಧ ವಿಧಿಸುವುದಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ಬಾಲಿವುಡ್ ನ ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ. ಆದ್ದರಿಂದ ನಮ್ಮ ಇತಿಹಾಸವನ್ನು ತಿರುಚಿರುವ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಿಜಯ್ ರೂಪಾನಿ ತಿಳಿಸಿದ್ದಾರೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ತಾನದ ನಂತರ ಗುಜರಾತ್ ನಲ್ಲಿಯೂ ಪದ್ಮಾವತಿ ಚಿತ್ರ ನಿಷೇಧಗೊಳ್ಳುವ ಸಾಧ್ಯತೆ ಇದ್ದು ಒಟ್ಟಾರೆ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಚಿತ್ರದ ಪ್ರದರ್ಶನವನ್ನು ತಮ್ಮ ರಾಜ್ಯಗಳಲ್ಲಿ ನಿಷೇಧಿಸುವುದಾಗಿ ತಿಳಿಸಿದ್ದಾರೆ.
ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ನಂಬಿಕೆ ಇದೆ. ಆದರೆ ನಮ್ಮ ಸಂಸ್ಕೃತಿಯನ್ನು ತಿರುಚಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ, ರಜಪೂತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವಂತಿರುವ ಚಿತ್ರದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ವಿಜಯ್ ರೂಪಾನಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


