ಲೆಫ್ಟಿನೆಂಟ್ ಕರ್ನಲ್ ಪುತ್ರಿ ಮೇಲೆ ಅತ್ಯಾಚಾರ: ಆರ್ಮಿ ಕರ್ನಲ್ ಸೆರೆ
ಲೆಫ್ಟಿನೆಂಟ್ ಕರ್ನಲ್ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ 56 ವರ್ಷದ ಸೇನಾ ಕರ್ನಲ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ...

Published On :
ಶಿಮ್ಲಾ: ಲೆಫ್ಟಿನೆಂಟ್ ಕರ್ನಲ್ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಸಂಬಂಧ 56 ವರ್ಷದ ಸೇನಾ ಕರ್ನಲ್ ಓರ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಆರ್ಮಿ ಟ್ರೈನಿಂಗ್ ಕಮಾಂಡ್(ಆಆರ್ಟಿಎಸಿ)ನಲ್ಲಿ ನಿಯೋಜಿಸಲ್ಪಟ್ಟಿದ್ದ ಲೆಫ್ಟಿನೆಂಟ್ ಕರ್ನಲ್ ಅವರ 21 ವರ್ಷದ ಪುತ್ರಿ ತನ್ನ ಮೇಲೆ ಆರ್ಮಿ ಕರ್ನಲ್ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದು ಯುವತಿಯ ದೂರಿನನ್ವಯ ವಿಚಾರಣೆಗಾಗಿ ಕರ್ನಲ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಲೆ|ಕರ್ನಲ್ ಪುತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಆರೋಪಿ ಅತ್ಯಾಚಾರಿ ಆರ್ಮಿ ಕರ್ನಲ್ ನನ್ನು ಬಂಧಿಸಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕರ್ನಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯ ಸಾಂಬಶಿವನ್ ಧೃಡಪಡಿಸಿದ್ದಾರೆ. ಆದರೆ ಆರೋಪಿ ಕರ್ನಲ್ ಗುರುತು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


