ದೇಶ

ಕುಲಭೂಷಣ್ ಪತ್ನಿ, ತಾಯಿಗೆ ಕಿರುಕುಳ ಕೊಡುವುದಿಲ್ಲ ಎಂಬುದನ್ನು ಖಾತರಿಪಡಿಸಿ: ಪಾಕಿಸ್ತಾನಕ್ಕೆ ಭಾರತ

ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಭೇಟಿಗೆ ಅವರ ಪತ್ನಿ ಮತ್ತು...

ಕುಲಭೂಷಣ್ ಪತ್ನಿ, ತಾಯಿಗೆ ಕಿರುಕುಳ ಕೊಡುವುದಿಲ್ಲ ಎಂಬುದನ್ನು ಖಾತರಿಪಡಿಸಿ: ಪಾಕಿಸ್ತಾನಕ್ಕೆ ಭಾರತ
ಕುಲಭೂಷಣ್ ಜಾಧವ್
Published On :
ನವದೆಹಲಿ: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಭೇಟಿಗೆ ಪತ್ನಿ ಮತ್ತು ತಾಯಿಗೆ ಪಾಕಿಸ್ತಾನ ಅನುಮತಿ ನೀಡಿದ್ದು ಕುಲಭೂಷಣ್ ಪತ್ನಿ ಮತ್ತು ತಾಯಿಗೆ ವಿಚಾರಣೆ ನೆಪದಲ್ಲಿ ಕಿರುಕುಳ ಕೊಡುವುದಿಲ್ಲವೆಂಬುದನ್ನು ಖಾತರಿಪಡಿಸುವಂತೆ ಪಾಕಿಸ್ತಾನಕ್ಕೆ ಭಾರತ ಕೇಳಿದೆ. 
ಆಶ್ಚರ್ಯಕರ ಬೆಳವಣಿಗೆಯಲ್ಲಿ ಪಾಕಿಸ್ತಾನ ಕಳೆದ ವಾರ ಮಾನವೀಯ ಆಧಾರದ ಮೇಲೆ ಜಾಧವ್ ಅವರಿಗೆ ಅವರ ಪತ್ನಿ ಮತ್ತು ತಾಯಿಯನ್ನು ಭೇಟಿ ಮಾಡಲು ಅನುಮತಿ ನೀಡಿದ್ದು ಈ ಸಂಬಂಧ ಭಾರತದ ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದೇವೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಾಲ್ ಅವರು ತಿಳಿಸಿದ್ದಾರೆ.
ಮಾನವೀಯ ಆಧಾರದ ಮೇಲೆ ಕುಲಭೂಷಣ್ ಜಾಧವ್ ಅವರು ತಮ್ಮ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ ಎಂದು ಮೊಹಮ್ಮದ್ ಫೈಸಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು. ಅಲ್ಲದೆ ಈ ಕುರಿತು ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನರ್ ಗೂ ಮಾಹಿತಿ ನೀಡಲಾಗಿತ್ತು. 
ಕಳೆದ ಏಪ್ರಿಲ್ ನಲ್ಲಿ ಗೂಢಾಚಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನ ಸೇನಾ ಕೋರ್ಟ್ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಈ ತೀರ್ಪಿಗೆ ಅಂತಾರಾಷ್ಟ್ರೀಯ ಕೋರ್ಟ್ ತಡೆ ನೀಡಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.