ದೇಶ

ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣಕ್ಕೆ ಎಐಎಡಿಎಂಕೆ ಎರಡೆಲೆ ಚಿನ್ಹೆ!

ತಮಿಳುನಾಡು ಸಿಎಂ ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣ ಎಐಎಡಿಎಂಕೆ ಪಕ್ಷದ ಎರಡೆಲೆ ಚಿನ್ಹೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣಕ್ಕೆ ಎಐಎಡಿಎಂಕೆ ಎರಡೆಲೆ ಚಿನ್ಹೆ!
ಸಂಗ್ರಹ ಚಿತ್ರ
Published On :
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಎಐಎಡಿಎಂಕೆ ಬಣ ರಾಜಕೀಯ ತಾರ್ಕಿಕ ಅಂತ್ಯ ಕಂಡಿದ್ದು, ಸಿಎಂ ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣ ಎಐಎಡಿಎಂಕೆ ಪಕ್ಷದ ಎರಡೆಲೆ ಚಿನ್ಹೆಯನ್ನು ಮರಳಿ  ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದ್ದು, ಸಿಎಂ ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬಣಕ್ಕೆ ಎಐಎಡಿಎಂಕೆ ಪಕ್ಷದ ಎರಡೆಲೆ ಚಿನ್ಹೆಯನ್ನು ನೀಡಲಾಗಿದೆ ಎಂದು ವರದಿ ಮಾಡಿದೆ. ಆದರೆ ಈ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ.
ಎರಡೆಲೆ ಚಿನ್ಹೆಗಾಗಿ ಹೋರಾಟ ನಡೆಸಿದ್ದ ವಿಕೆ ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರಿಗೆ ಭಾರಿ ಮುಜುಗರವಾಗಿದ್ದು, ಈ ಹಿಂದೆ ಜಯಾ ನಿಧನದ ಬಳಿಕ ಅವರ ಆರ್ ಕೆ ನಗರ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆ ಸಂದರ್ಭದಲ್ಲಿ ಶಶಿಕಲಾ ಬಣ ಹಾಗೂ  ಪಳನಿಸ್ವಾಮಿ ಬಣ ಕಚ್ಚಾಡಿತ್ತು. 
ಅಲ್ಲದೆ ಎರಡೆಲೆ ಚಿನ್ಹೆಗಾಗಿ ದಿನಕರನ್ ಚುನಾವಣಾ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಕುರಿತ ಅರ್ಜಿ ಕೂಡ ಇನ್ನು ವಿಚಾರಣೆ ಹಂತದಲ್ಲಿದ್ದು, ಇದೀಗ ಆಯೋಗದ ನಿರ್ಧಾರ ಪಳನಿಸ್ವಾಮಿ ಬಣಕ್ಕೆ ಬಲ ನೀಡಿದಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.