ದೇಶ

ಗುಜರಾತ್ ಅಭಿವೃದ್ಧಿ ಮಾದರಿ ಎಂದರೆ ಮೋದಿ ಮಾರ್ಕೆಟಿಂಗ್ ಮಾದರಿ: ರಾಹುಲ್ ಗಾಂಧಿ

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ದಿನಗಳಷ್ಟೇ ಉಳಿದಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ಮಾದರಿ ಮೋದಿ ಮಾರ್ಕೆಟಿಂಗ್ ಮಾದರಿ ಎಂದು ಟೀಕಿಸಿದ್ದಾರೆ.

ಗುಜರಾತ್ ಅಭಿವೃದ್ಧಿ ಮಾದರಿ ಎಂದರೆ ಮೋದಿ ಮಾರ್ಕೆಟಿಂಗ್ ಮಾದರಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ದಿನಗಳಷ್ಟೇ ಉಳಿದಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ಮಾದರಿ ಮೋದಿ ಮಾರ್ಕೆಟಿಂಗ್ ಮಾದರಿ ಎಂದು ಟೀಕಿಸಿದ್ದಾರೆ. 
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 2 ದಿನಗಳ ಗುಜರಾತ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ರಾಜ್ಯದಲ್ಲಿ ಕಳೆದ 22 ವರ್ಷಗಳಲ್ಲಿ ಬಿಜೆಪಿ ಏನನ್ನು ಸಾಧಿಸಿದೆ ಎಂದು ಪ್ರಶ್ನಿಸಿದ್ದಾರೆ. ಗುಜರಾತ್ ನಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ, ಮಹಿಳೆಯರ ಶಕ್ತಿಯನ್ನು ಬಳಕೆ ಮಾಡಿಕೊಳ್ಳುವುದು, ಯುವಜನತೆಯ ಶಕ್ತಿಯನ್ನು ಬಳಕೆ ಮಾಡಿಕೊಳ್ಳುವುದು ಗುಜರಾತ್ ಮಾದರಿ. ಕಳೆದ 22 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವುದು ಗುಜರಾತ್ ಮಾದರಿಯಲ್ಲ, ಬದಲಾಗಿ ನರೇಂದ್ರ ಮೋದಿ ಮಾರ್ಕೆಟಿಂಗ್ ಮಾದರಿ, ಈಗ ಅದು ವಿಜಯ್ ರೂಪಾನಿ ಮಾದರಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಗುಜರಾತ್ ಮಾದರಿಯನ್ನು ಮರು ವ್ಯಾಖ್ಯಾನಿಸಲು ರಾಜ್ಯದ ಜನತೆಗೆ ರಾಹುಲ್ ಗಾಂಧಿ ಕರೆ ನೀಡಿದ್ದು, ಗುಜರಾತ್ ಕೇವಲ 5-10 ಕೈಗಾರಿಕೋದ್ಯಮಿಗಳಿಗೆ ಸೇರಿದ್ದಲ್ಲ, ಗುಜರಾತ್ ರೈತರಿಗೆ ಸೇರಿದ್ದು, ಕಾರ್ಮಿಕರಿಗೆ ಸೇರಿದ್ದು, ಸಣ್ಣ ಉದ್ಯಮಿಗಳಿಗೆ ಸೇರಿದ್ದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.