ದೇಶ

ಗುಜರಾತ್ ಚುನಾವಣೆ: ಜೆಡಿಯು ಪರ ನಿತೀಶ್ ಕುಮಾರ್ ಪ್ರಚಾರ ಮಾಡುವುದಿಲ್ಲ

ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮಿತ್ರ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಿದೆ. ಆದರೆ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ...

ಗುಜರಾತ್ ಚುನಾವಣೆ: ಜೆಡಿಯು ಪರ ನಿತೀಶ್ ಕುಮಾರ್ ಪ್ರಚಾರ ಮಾಡುವುದಿಲ್ಲ
ನಿತೀಶ್ ಕುಮಾರ್
Published On :
ಪಾಟ್ನಾ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮಿತ್ರ ಜೆಡಿಯು ಏಕಾಂಗಿಯಾಗಿ ಸ್ಪರ್ಧಿಸಿದೆ. ಆದರೆ ಜೆಡಿಯು ಅಧ್ಯಕ್ಷ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುಜರಾತ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುತ್ತಿಲ್ಲ.
ನಿತೀಶ್ ಕುಮಾರ್ ಅವರು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಕ್ಕಾಗಿ 20 ಸ್ಟಾರ್ ಪ್ರಚಾರಕರನ್ನು ಗುಜರಾತ್ ಗೆ ಕಳುಹಿಸುತ್ತಿದ್ದಾರೆ ಎಂದು ಜೆಡಿಯು ನಾಯಕ ಇಂದು ತಿಳಿಸಿದ್ದಾರೆ.
ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಯು 50 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದು, ಜೆಡಿಯು ರಾಜ್ಯಸಭಾ ಸದಸ್ಯ ಹಾಗೂ ನಿತೀಶ್ ಕುಮಾರ್ ಆಪ್ತ ಆರ್ ಸಿಪಿ ಸಿಂಗ್, ಜೆಡಿಯು ಪ್ರಧಾನ ಕಾರ್ಯದರ್ಶಿ ಕೆಸಿ ತ್ಯಾಗಿ, ಬಿಹಾರ ಸಚಿವ ಲಲನ್ ಸಿಂಗ್ ಹಾಗೂ ಮಾಜಿ ಸಚಿವ ಶ್ಯಾಮ್ ರಜಾಕ್ ಅವರು ಸ್ಟಾರ್ ಪ್ರಚಾರಕರಾಗಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ.
ಕಳೆದ ಜುಲೈ ನಲ್ಲಿ ಆರ್ ಜೆಡಿ ಮತ್ತು ಕಾಂಗ್ರೆಸ್ ನೊಂದಿಗೆ ಮೈತ್ರಿ ಕಡಿದುಕೊಂಡ ನಿತೀಶ್ ಕುಮಾರ್ ಮತ್ತೆ ಬಿಜೆಪಿಯೊಂದಿಗೆ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದ್ದರು. ಅಲ್ಲದೆ ಕೆಲ ದಿನಗಳ ನಂತರ ಎನ್ ಡಿಎಗೆ ಮರು ಸೇರ್ಪಡೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.