ದೇಶ

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರನ ಬಂಧನ

ಜಮ್ಮು ಮತ್ತು ಕಾಶ್ಮೀರ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ಶನಿವಾರ ತಿಳಿದಬಂದಿದೆ...

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರನ ಬಂಧನ
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ ಎಂದು ಶನಿವಾರ ತಿಳಿದಬಂದಿದೆ. 
ಕುಪ್ವಾರ ಜಿಲ್ಲೆಯ ಮಗಮ್ ಎಂಬ ಪ್ರದೇಶದಲ್ಲಿ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಸೇನಾಧಿಕಾರಿಗಳು ಹೇಳಿದ್ದಾರೆ. 
ಬಂಧಿತ ಉಗ್ರ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವನಾಗಿದ್ದು, ಉಗ್ರನ ಕುರಿತು ಉಳಿದ ಮಾಹಿತಿಗಳನ್ನು ಬಹಿರಂಗಪಡಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಪ್ರಸ್ತುತ ಉಗ್ರನನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. 
ಮಂಗಳವಾರವಷ್ಟೇ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿತ್ತು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.