ಟಿಎಂಸಿ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮುಕುಲ್ ರಾಯ್
ತಮ್ಮ ವಿರುದ್ದ ನಿಂದನಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮುಕುಲ್ ರಾಯ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ಭಾನುವಾರ...

Published On :
ಕೋಲ್ಕತಾ: ತಮ್ಮ ವಿರುದ್ದ ನಿಂದನಾತ್ಮಕ ಹೇಳಿಕೆ ನೀಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಮುಕುಲ್ ರಾಯ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಮಾನನಷ್ಟ ಮೊಕದ್ದಮೆ ಕುರಿತಂತೆ ಅಭಿಷೇಕ್ ಬ್ಯಾನರ್ಜಿಯವರಿಗೆ ಮುಕುಲ್ ರಾಯ್ ಅವರು ನೋಟಿಸ್ ಕಳುಹಿಸಿದ್ದು, ಈ ಕುರಿತ ವಿಚಾರಣೆ ದೆಹಲಿಯ ಪಾಟಿಯಾಲ ನ್ಯಾಯಾಲಯದಲ್ಲಿ ಡಿಸೆಂಬರ್ 1 ರಂದು ನಡೆಯಲಿದೆ ಎಂದು ವರದಿಗಳು ತಿಳಿಸಿವೆ.
ಕೆಲ ದಿನಗಳ ಹಿಂದಷಷ್ಟೇ ಅಭಿಷೇಕ್ ಬ್ಯಾನರ್ಜಿಯವರು ರಾಯ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಸಾರ್ವಜನಿಕ ರ್ಯಾಲಿಯಲ್ಲಿ ಬಿಸ್ವ ಬಾಂಗ್ಲಾ ಮಾರ್ಕೆಟಿಂಗ್ ಕಾರ್ಪೊರೇಷನ್'ನನ್ನು ಸರ್ಕಾರ ನಡೆಸುತ್ತಿಲ್ಲ. ಬದಲಾಗಿ ಅಭಿಷೇಕ್ ಮಾಲೀಕತ್ವದ ಖಾಸಗಿ ಕಂಪನಿ ನೋಡಿಕೊಳ್ಳುತ್ತಿದೆ ಎಂದು ಹೇಳಿದ್ದರು.
ಹೇಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದ ಅಭಿಷೇಕ್ ಅವರು ತಮ್ಮ ಪರ ವಕೀಲರ ಮೂಲಕ ರಾಯ್ ಅವರಿಗೆ ನ.10 ರಂದು ನೋಟಿಸ್ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನೋಟಿಸ್Abhishek Banerjeeಅಭಿಷೇಕ್ ಬ್ಯಾನರ್ಜಿMukul Roylegal noticeಮುಕುಲ್ ರಾಯ್ಮಾನನಷ್ಟ ಮೊಕದ್ದಮೆDefamation CaseTMC MPಟಿಎಂಪಿ ಸಂಸದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


