ದೇಶ

ಆಧಾರ್ ಜೋಡಣೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಸರ್ಕಾರ

ಸರ್ಕಾರದ ವಿವಿಧ ಸೇವೆಗಳು ಜನರಿಗೆ ಸಿಗಲು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ಆದೇಶವನ್ನು ...

ಆಧಾರ್ ಜೋಡಣೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಸರ್ಕಾರದ ವಿವಿಧ ಸೇವೆಗಳು ಜನರಿಗೆ ಸಿಗಲು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಲವು ತೋರಿದೆ.
ಈ ವಿಷಯದಲ್ಲಿ ಸಾಂವಿಧಾನಿಕ ಪೀಠ ಮಾತ್ರ ಮಧ್ಯಂತರ ಆದೇಶವನ್ನು ನೀಡಲು ಸಾಧ್ಯ ಎಂದು ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.
ಈ ಮಧ್ಯೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ವಿವಿಧ ಯೋಜನೆಗಳ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಅವಧಿಯನ್ನು ಮುಂದಿನ ವರ್ಷ ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ ಎಂದು ಹೇಳಿದೆ.
ವಿವಿಧ ಅಭಿವೃದ್ಧಿ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್ ಸಂಖ್ಯೆಯನ್ನು ಕಡ್ಡಾಯ ಮಾಡಬಾರದು ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದರು. 
ಮೊಬೈಲ್ ಸಂಖ್ಯೆಗೆ ಆಧಾರ್ ನ್ನು ಜೋಡಿಸಬೇಕೆಂಬ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕಳೆದ 13ರಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಇಂತಹ ನೂರಾರು ಅರ್ಜಿಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದೆ ಎಂದು ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದು. 
ಪ್ರಸ್ತುತ ಬ್ಯಾಂಕ್ ಗ್ರಾಹಕರ ಬ್ಯಾಂಕ್ ಖಾತೆಗಳ ಜೊತೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಇರುವ ಅಂತಿಮ ದಿನಾಂಕ ಡಿಸೆಂಬರ್ 31 ಮತ್ತು ಮೊಬೈಲ್ ಸಂಖ್ಯೆಯನ್ನು ಜೋಡಿಸಲು ಮುಂದಿನ ವರ್ಷ ಫೆಬ್ರವರಿ 6 ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.