ಭಾರತೀಯರೇ ನಮಗೆಲ್ಲಾ ಸ್ಫೂರ್ತಿ: ಇವಾಂಕ ಟ್ರಂಪ್
ಭಾರತೀಯರೇ ನಮಗೆಲ್ಲಾ ಸ್ಫೂರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಹಾಗೂ ಅಮೆರಿಕ ಅಧ್ಯಕ್ಷರ ಹಿರಿಯ ಸಲಹೆಗಾರ್ತಿ ಇವಾಂಕ ಟ್ರಂಪ್ ಮಂಗಳವಾರ ಹೇಳಿದ್ದಾರೆ.

Published On :
ಹೈದರಾಬಾದ್: ಭಾರತೀಯರೇ ನಮಗೆಲ್ಲಾ ಸ್ಫೂರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಹಾಗೂ ಅಮೆರಿಕ ಅಧ್ಯಕ್ಷರ ಹಿರಿಯ ಸಲಹೆಗಾರ್ತಿ ಇವಾಂಕ ಟ್ರಂಪ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮುತ್ತಿನಗರಿಯಲ್ಲಿ ಅಮೆರಿಕ ಸಹಭಾಗಿತ್ವದಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯಾದ ಮೊದಲ ಜಾಗತಿಕ ಉದ್ಯಮಶೀಲತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಇವಾಂಕ, ಭಾರತ ಅಮೆರಿಕದ ನಿಜವಾದ ಸ್ನೇಹಿತ ಮತ್ತು ಅತ್ಯಂತ ವೇಗವಾಗಿ ಆರ್ಥಿಕ ಅಭಿವೃದ್ಧಿ ಸಾಧಿಸುತ್ತಿರುವ ದೇಶ ಎಂದರು.
70ನೇ ಸ್ವಾತಂತ್ರ್ಯೋತ್ಸವ ಆಚರಿಸಿಕೊಳ್ಳುತ್ತಿರುವ ಭಾರತೀಯರನ್ನು ನಾನು ಅಭಿನಂದಿಸುತ್ತೇನೆ. ಬಾಲ್ಯದಲ್ಲಿ ಚಾಹ ಮಾರುತ್ತಿದ್ದ ವ್ಯಕ್ತಿ ಇಂದು ಭಾರತದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲದ ಪರಿವರ್ತನೆ ಅಥವಾ ಬದಲಾವಣೆ ಸಾಧ್ಯ ಎಂಬುದನ್ನು ಸಾಬೀತು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇವಾಂಕ ಟ್ರಂಪ್ ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತ ವಿಶ್ವಕ್ಕೆ ಭರವಸೆಯ ರಾಷ್ಟ್ರವಾಗಿ ಕಾಣಿಸುತ್ತಿದೆ. ಮೋದಿ ಪ್ರಜಾಪ್ರಭುತ್ವದ ಸಂಕೇತವಾಗಿದ್ದಾರೆ. ಈ ಶೃಂಗಸಭೆಯು ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕತೆ ಮತ್ತು ರಕ್ಷಣಾತ್ಮಕ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಇವಾಂಕ ಹೇಳಿದರು.
ಪ್ರಧಾನಿ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿರುವುದು ಶ್ಲಾಘನೀಯ. ಕಳೆದ 10 ವರ್ಷಗಳಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಳವಾಗಿದ್ದು, ಶೇ.52ರಷ್ಟು ಮಹಿಳಾ ಉದ್ಯಮಿಗಳು ಭಾಗಿಯಾಗಿದ್ದು ಸಂತಸ ತಂದಿದೆ ಎಂದರು.
ಉದ್ಯಮ ಶೀಲತಾ ಸಮಾವೇಶಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಇವಾಂಕ, ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದರು. ಅಲ್ಲದೇ ಭಾರತದ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡರು.
ಇವಾಂಕ ಅವರು ಶ್ವೇತ ಭವನದ ಹಿರಿಯ ಅಧಿಕಾರಿಗಳ ನಿಯೋಗವೊಂದನ್ನು ಈ ಸಮಾವೇಶಕ್ಕೆ ಕರೆತಂದಿದ್ದು, ಶ್ವೇತ ಭವನ ಸಲಹೆಗಾರ್ತಿಯಾಗಿ ಇದು ಅವರ ಮೊದಲ ಭಾರತ ಭೇಟಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಭಾರತೀಯರುGlobal Entrepreneurship SummitIvanka Trumpಇವಾಂಕ ಟ್ರಂಪ್People of Indiaಜಾಗತಿಕ ಉದ್ಯಮಶೀಲತಾ ಸಮಾವೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


