ದೇಶ

ಬಿಹಾರದಲ್ಲಿ 'ಪದ್ಮಾವತಿ'ಗೆ ನಿಷೇಧ ಹೇರಿದ ನಿತೀಶ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೀಪಿಕಾ ಪಡುಕೋಣೆ ಅಭಿನಯದ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದ್ಮಕ....

ಬಿಹಾರದಲ್ಲಿ 'ಪದ್ಮಾವತಿ'ಗೆ ನಿಷೇಧ ಹೇರಿದ ನಿತೀಶ್ ಕುಮಾರ್
ಪದ್ಮಾವತಿ ಚಿತ್ರದ ಸ್ಟಿಲ್
Published On :
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ದೀಪಿಕಾ ಪಡುಕೋಣೆ ಅಭಿನಯದ ಸಂಜಯ್ ಲೀಲಾ ಭನ್ಸಾಲಿ ಅವರ ವಿವಾದ್ಮಕ ಚಿತ್ರ 'ಪದ್ಮಾವತಿ'ಗೆ ರಾಜ್ಯದಲ್ಲಿ ನಿಷೇಧ ಹೇರಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಬಿಹಾರದಲ್ಲಿ ಪದ್ಮಾವತಿ ಬಿಡುಗಡೆಗೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ಬಿಜೆಪಿ ಶಾಸಕ ನೀರಜ್ ಕುಮಾರ್ ಬಬ್ಲು ಅವರು ನಿತೀಶ್ ಕುಮಾರ್ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಿಎಂ ಇಂದು ಚಿತ್ರಕ್ಕೆ ನಿಷೇಧ ಹೇರುವಂತೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿತ್ರಕ್ಕೆ ಸಂಬಂಧಿಸಿದ ವಿವಾದಗಳು ಅಂತ್ಯಗೊಳ್ಳುವವರೆಗೆ ಬಿಹಾರದಲ್ಲಿ 'ಪದ್ಮಾವತಿ' ಪ್ರದರ್ಶನಕ್ಕೆ ನಿಷೇಧ ಹೇರಲಾಗಿದೆ.
ಬಬ್ಲು ಅವರ ರಜಪೂತ್ ಸಮುದಾಯಕ್ಕೆ ಸೇರಿದವರಾಗಿದ್ದು, ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ಮತ್ತು ಶಾಹೀದ್‌ ಕಪೂರ್‌ ಅಭಿನಯದ 'ಪದ್ಮಾವತಿ' ಚಿತ್ರ ರಜಪೂತರ ಕೆಂಗಣ್ಣಿಗೆ ಗುರಿಯಾಗಿದೆ. ಚಿತ್ರದಲ್ಲಿ ರಾಣಿ ಪದ್ಮಿನಿಯ ಇತಿಹಾಸವನ್ನು ತಿರುಚಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ರಾಜಕೀಯ ರಂಗು ಪಡೆಯುತ್ತಿರುವ ಈ ಚಿತ್ರದ ವಿರುದ್ಧ ಪ್ರತಿಭಟನೆಗಳು ಶುರುವಾಗಿದ್ದು, ಪದ್ಮಾವತಿ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.