ಜಮ್ಮು-ಕಾಶ್ಮೀರ: ರಜೌರಿ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ರಜೌರಿ ಜಿಲ್ಲೆಯ ಝಂಗರ್ ಎಂಬ ಪ್ರದೇಶದ ಗಡಿ ನಿಯಂತ್ರಿಣ ರೇಖೆ ಬಳಿ ಪಾಕಿಸ್ತಾನ ಸೇನೆ ಕಳೆದ ರಾತ್ರಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನ.15 ಮತ್ತು ನ17 ರಂದು ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಇದಾದ ವಾರಗಳ ಬಳಿಕ ಪಾಕಿಸ್ತಾನ ಸೇನೆ ಗಡಿಯಲ್ಲಿ ಉದ್ಧಟತನವನ್ನು ಪ್ರದರ್ಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and Kashmirಕದನ ವಿರಾಮ ಉಲ್ಲಂಘನೆRajouriರಜೌರಿViolation of the ceasefire
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


