ದೇಶ

ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್: ತೆರಿಗೆ ಸುಧಾರಣೆ, ಮೇಕ್ ಇನ್ ಇಂಡಿಯಾಗೆ ಒತ್ತು

2018 ರ ಫೆ.1 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆಯಾಗಲಿದ್ದು, ಹಲವು ಸುಧಾರಣಾ ಕ್ರಮಗಳ ಕೇಂದ್ರಿತವಾಗಿರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.

ಮೋದಿ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್: ತೆರಿಗೆ ಸುಧಾರಣೆ, ಮೇಕ್ ಇನ್ ಇಂಡಿಯಾಗೆ ಒತ್ತು
Modi
Published On :
ನವದೆಹಲಿ: 2018 ರ ಫೆ.1 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆಯಾಗಲಿದ್ದು, ಹಲವು ಸುಧಾರಣಾ ಕ್ರಮಗಳ ಕೇಂದ್ರಿತವಾಗಿರಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ತೆರಿಗೆ ಸುಧಾರಣೆ, ಡ್ಯುಟಿ ರೇಟ್ ಗಳನ್ನು ಕಡಿಮೆ ಮಾಡುವುದು, ತೆರಿಗೆ ಹೊರೆಯನ್ನು ಕಡಿಮೆ ಮಾಡಿ ನೀತಿಗಳನ್ನು ಜಾರಿಗೆ ತರುವುದು ಹಾಗೂ ಮೇಕ್ ಇನ್ ಇಂಡಿಯಾಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುವುದಕ್ಕೆ  ಬಜೆಟ್ ನಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ವಿಶ್ಲೇಷಿಸಲಾಗುತಿದೆ. 
ಜಿಎಸ್ ಟಿ ಜಾರಿಯ ನಂತರ ಮೊದಲ ಬಾರಿಗೆ ಬಜೆಟ್ ಮಂಡನೆಯಾಗಲಿದ್ದು, ತೆರಿಗೆ ನೀತಿಯನ್ನು ರಚಿವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯಗಳಿಂದ ಸಲೆಹಗಳನ್ನು ಪುನರ್ ಪರಿಶೀಲನೆ ನಡೆಸಲಿದೆ. ಕಸ್ಟಮ್ಸ್ ಹಾಗೂ ಸೆಂಟ್ರಲ್ ಅಬಕಾರಿ ಸುಂಕ ಸ್ವರೂಪದಲ್ಲಿನ ಬದಲಾವಣೆಗಳ ಬಗ್ಗೆ ವಿಸ್ತೃತ ವಿವರಣೆಯೊಂದಿಗೆ ಸಲಹೆಗಳನ್ನು ನೀಡುವಂತೆ ಈಗಾಗಲೇ ಹಣಕಾಸು ಇಲಾಖೆ ಕಾರ್ಯದರ್ಶಿ ಹಸ್ಮುಖ್ ಅಧಿಯಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಬೆಳವಣಿಗೆ ಆಧಾರಿತ ತೆರಿಗೆ ವ್ಯವಸ್ಥೆ 
ತೆರಿಗೆ ಸ್ವರೂಪದಲ್ಲಿ ಸುಧಾರಣೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು, ಬೆಳವಣಿಗೆ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಬಜೆಟ್ ಘೋಷಣೆಗಳು ಇರಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.