ಮಹಿಳೆಯರಿಗೆ ಸ್ವಂತ ಉದ್ದಿಮೆ ಆರಂಭಿಸಲು ತಂತ್ರಜ್ಞಾನ ಸಹಾಯ ಮಾಡುತ್ತದೆ: ಇವಾಂಕಾ ಟ್ರಂಪ್
ತಂತ್ರಜ್ಞಾನಗಳು ಮಹಿಳೆಯರಿಗೆ ಸ್ವಂತ ಉದ್ದಿಮೆ, ವ್ಯಾಪಾರ ವಹಿವಾಟುಗಳನ್ನು ಆರಂಭಿಸಲು ಮತ್ತು ಆಧುನಿಕ ಉದ್ಯೋಗಸ್ಥ ಕುಟುಂಬಗಳಿಗೆ ಕೆಲಸದಲ್ಲಿ ಸಡಿಲತೆ .....

ಹೈದರಾಬಾದ್: ತಂತ್ರಜ್ಞಾನಗಳು ಮಹಿಳೆಯರಿಗೆ ಸ್ವಂತ ಉದ್ದಿಮೆ, ವ್ಯಾಪಾರ ವಹಿವಾಟುಗಳನ್ನು ಆರಂಭಿಸಲು ಮತ್ತು ಆಧುನಿಕ ಉದ್ಯೋಗಸ್ಥ ಕುಟುಂಬಗಳಿಗೆ ಕೆಲಸದಲ್ಲಿ ಸಡಿಲತೆ ನೀಡಲು ಸಹಾಯವಾಗಬಹುದು ಎಂದು ಡೊನಾಲ್ಡಾ ಟ್ರಂಪ್ ಪುತ್ರಿ ಹಾಗೂ ಅವರ ಸಲಹೆಗಾರ್ತಿ ಇವಾಂಕಾ ಟ್ರಂಪ್ ಇಂದು ಹೈದರಾಬಾದ್ ನಲ್ಲಿ ಉದ್ಯಮಿಗಳ ಸಮಾವೇಶದಲ್ಲಿ ಹೇಳಿದ್ದಾರೆ.
ಆಧುನಿಕ ತಂತ್ರಜ್ಞಾನಗಳು ಮಹಿಳೆಯರಿಗೆ ವೈಯಕ್ತಿಕವಾಗಿ ಮತ್ತು ವೃತ್ತಿಯಲ್ಲಿ ಕೂಡ ಉಪಯೋಗವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಹಿಳಾ ಉದ್ಯಮಿಗಳಿಗೆ ತಂತ್ರಜ್ಞಾನ ಹಲವಾರು ಅವಕಾಶಗಳನ್ನು ಒದಗಿಸುತ್ತದೆ. ಜಾಗತಿಕ ಮುಕ್ತ ಸಮಾಜದಲ್ಲಿ ದೇಶೀಯ ಬೆಳವಣಿಗೆಗೆ ಕೂಡ ಇದರಿಂದ ಅನುಕೂಲವಿದೆ ಎಂದು ಜಾಗತಿಕ ಉದ್ಯಮಿಗಳ ಸಮಾವೇಶದ 8ನೇ ಆವೃತ್ತಿಯಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಹೇಳಿದರು.
ಅಡೆತಡೆಗಳನ್ನು ಕಡಿಮೆಮಾಡಿ ಮಹಿಳೆಯರಿಗೆ ಹೆಚ್ಚು ಅನುಕೂಲಮಾಡಿಕೊಡಲು, ಸಶಕ್ತೀಕರಣಕ್ಕೆ ತಂತ್ರಜ್ಞಾನ ಸಹಾಯವಾಗಲಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ವೈಯಕ್ತಿಕವಾಗಿ ಮತ್ತು ವೃತ್ತಿಪರರಾಗಿ ಜೀವನವನ್ನು ಸರಿತೂಗಿಸಲು ಪ್ರಯತ್ನಿಸುತ್ತಿರುವ ಕ್ರಮ ಶ್ಲಾಘನೀಯ. ಸಮಾಜದಲ್ಲಿ ಮೂಲಭೂತ ವ್ಯವಸ್ಥೆಯಲ್ಲಿ ಬದಲಾವಣೆಯಾದರೆ ಮಹಿಳೆಯರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


