ದೇಶ

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಟಿಟಿವಿ ದಿನಕರನ್ ಸ್ಪರ್ಧೆ

ಎಐಎಡಿಎಂಕೆ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಅವರು ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣನಗರ ಉಪ ಚುನಾವಣೆಯಲ್ಲಿ....

ಚೆನ್ನೈ: ಆರ್ ಕೆ ನಗರ ಉಪ ಚುನಾವಣೆಗೆ ಟಿಟಿವಿ ದಿನಕರನ್ ಸ್ಪರ್ಧೆ
ಟಿಟಿವಿ ದಿನಕರನ್
Published On :
ಚೆನ್ನೈ: ಎಐಎಡಿಎಂಕೆ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಅವರು ಡಿಸೆಂಬರ್ 21ರಂದು ನಡೆಯಲಿರುವ ರಾಧಾಕೃಷ್ಣನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಬುಧವಾರ ದಿನಕರನ್ ಬಣ ಘೋಷಿಸಿದೆ.
ಮುಂಬರುವ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಟಿಟಿವಿ ದಿನಕರನ್ ಅವರು ಸ್ಪರ್ಧಿಸಲಿದ್ದಾರೆ ಎಂದು ಬಂಡಾಯ ಬಣದ ಹಿರಿಯ ನಾಯಕ ಎಸ್ ಅನ್ಬಗಳನ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ಅವರ ಅನುಮತಿ ಪಡೆದೆ ದಿನಕರನ್ ಅವರು ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನದಿಂದ ತೆರವಾದ ಆರ್ ಕೆ ನಗರ ಕ್ಷೇತ್ರಕ್ಕೆ ಕಳೆದ ಏಪ್ರಿಲ್ ನಲ್ಲಿ ಚುನಾವಣೆ ನಿಗದಿಯಾಗಿತ್ತು. ಈ ವೇಳೆ ದಿನಕರನ್ ಅವರು ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಮತದಾರರಿಗೆ ಭಾರಿ ಪ್ರಮಾಣದ ಹಣ ಹಂಚಲಾಗುತ್ತಿದೆ ಎಂಬ ಕಾರಣಕ್ಕೆ ಚುನಾವಣಾ ಆಯೋಗಕ್ಕೆ ಉಪ ಚುನಾವಣೆಯನ್ನೇ ರದ್ದುಗೊಳಿಸಿತ್ತು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ದಿನಕರನ್ ಅವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.