ದೇಶ

ಆರ್ ಕೆ ನಗರ ಉಪ ಚುನಾವಣೆಯಲ್ಲಿ ಟಿಟಿವಿ ದಿನಕರನ್ ಸ್ಪರ್ಧೆ

ಉಚ್ಛಾಟಿತ ಎಐಎಡಿಎಂಕೆ ಮುಖಂಡ ಟಿಟಿವಿ ದಿನಕರನ್ ಮುಂಬರುವ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಆರ್ ಕೆ ನಗರ ಉಪ ಚುನಾವಣೆಯಲ್ಲಿ ಟಿಟಿವಿ ದಿನಕರನ್ ಸ್ಪರ್ಧೆ
ಸಂಗ್ರಹ ಚಿತ್ರ
Published On :
ಚೆನ್ನೈ: ಉಚ್ಛಾಟಿತ ಎಐಎಡಿಎಂಕೆ ಮುಖಂಡ ಟಿಟಿವಿ ದಿನಕರನ್ ಮುಂಬರುವ ಆರ್ ಕೆ ನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಶಶಿಕಲಾ ಬಣದ ಹಿರಿಯ ನಾಯಕರು ನಿನ್ನೆ ಸಭೆ ಸೇರಿ ನಿರ್ಧರಿಸಿದ್ದು, ಶಶಿಕಲಾ ಬಣದ ವಕ್ತಾರ ಎಸ್ ಅನ್ಬುಗಳನ್ ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.  ದಿನಕರನ್ ಸ್ಪರ್ಧೆಗೆ ಈಗಾಗಲೇ ವಿಕೆ ಶಶಿಕಲಾ  ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ದಿನಕರನ್ ಈ ಹಿಂದೆ ಆಯೋಜನೆಗೊಂಡಿದ್ದ ಚುನಾವಣೆ ವೇಳೆಯಲ್ಲೂ ಎಐಎಡಿಎಂಕೆ (ಅಮ್ಮಾ) ಬಣದಿಂದ ಸ್ಪರ್ಧಿಸಿದ್ದರು. ಆದರೆ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಚುನಾವಣಾ ಆಯೋಗ ಚುನಾವಣೆಯನ್ನೇ  ರದ್ದು ಪಡಿಸಿತು. ಚುನಾವಣೆ ವೇಳೆಯಲ್ಲಿ ಆರ್ ಕೆ ನಗರದಲ್ಲಿ ವ್ಯಾಪಕ ಹಣ ಮತ್ತು ಚುನಾವಣಾ ಅಕ್ರಮಗಳು ನಡೆಯುತ್ತಿದ್ದವು ಎಂಬ ಆರೋಪದ ಮೇರೆಗೆ ಆಯೋಗ ಚುನಾವಣೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿತ್ತು. 
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕಾಲಿಕ ಮರಣದಿಂದ ತೆರವಾಗಿರುವ ಆರ್.ಕೆ.ನಗರ ವಿಧಾನಸಭಾ ಉಪಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗ ಪ್ರಕಟಿಸಿದೆ. ಡಿ.31ರ ಒಳಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿತ್ತು. ಅದರಂತೆ, ಉಪಚುನಾವಣೆಗೆ ಡಿ.21ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು. ಡಿ.24ರಂದು ಮತ ಎಣಿಕೆ ನಡೆಯಲಿದೆ. ಡಿ.4 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿ.5 ರಿಂದ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಡಿ.7 ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.