ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ ಚಿದಂಬರಂ ಆಪ್ತರ ಮನೆ ಮೇಲೆ ಇಡಿ ದಾಳಿ

ಮಹತ್ವದ ಬೆಳವಣಿಗೆಯಲ್ಲಿ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಪಿಚಿದಂಬರಂ ಅವರ ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಪಿ ಚಿದಂಬರಂ ಆಪ್ತರ ಮನೆ ಮೇಲೆ ಇಡಿ ದಾಳಿ
ಸಂಗ್ರಹ ಚಿತ್ರ
Published On :
ಚೆನ್ನೈ: ಮಹತ್ವದ ಬೆಳವಣಿಗೆಯಲ್ಲಿ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಪಿಚಿದಂಬರಂ ಅವರ ಆಪ್ತರು ಮತ್ತು ಸಂಬಂಧಿಗಳ ಮನೆ ಮೇಲೆ ದಾಳಿ  ಮಾಡಿದ್ದಾರೆ.
ಚೆನ್ನೈ ಮತ್ತು ಕೋಲ್ಕತಾ ನಗರಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇಡಿ ಮೂಲಗಳ ಪ್ರಕಾರ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ  ವಿರುದ್ಧ ಕೇಳಿಬಂದಿರುವ ಹವಾಲಾ ದಂಧೆ ಪ್ರಕರಣ ಹಾಗೂ ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ನಾಲ್ಕು ಪ್ರದೇಶಗಳು ಮತ್ತು ಕೋಲ್ಕತಾದ 2 ಪ್ರದೇಶಗಳಲ್ಲಿ  ಅಧಿಕಾರಿಗಳು ನಡೆಸಿದ್ದು, ಈ ವೇಳೆ ಹಲವು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನೈನ ತೆನಾಯಂಪೇಟ್ ನಲ್ಲಿರುವ ಕಾರ್ತಿ ಚಿದಂಬರಂ ಅವರ ಮಾವ ಎಸ್ ಕೈಲಾಸನ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂತೆಯೇ ಚಿದಂಬರಂ ಅವರ ಆಪ್ತರಾದ ಎಸ್ ಸಂಬಾಮೂರ್ತಿ ಮತ್ತು ರಾಮ್  ಜೀ ನಟರಾಜನ್ ಎಂಬುವವರ ಮನೆ ಮೇಲೆ ಹಾಗೂ ಲೀ ರೋಡ್ ಹಾಗೂ ಲವ್ ಲಾಕ್ ಪ್ಯಾಲೆಸ್ ನಲ್ಲಿರುವ ಮನೋಜ್ ಮೊಹಂಕಾ ಅವರಿಗೆ ಸಂಬಂಧಿಸಿದ ಕಚೇರಿಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.