ವಿಶ್ವ ಸುಂದರಿ ಮಾನುಷಿಗೆ ವಿಶೇಷ ಸಾಧನೆ ಮಾಡಿದ ವರ್ಷದ ವ್ಯಕ್ತಿ ಪ್ರಶಸ್ತಿ
ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಛಿಲ್ಲರ್ ಈ ಸಾಲಿನ ವಿಶೇಷ ಸಾಧನೆಗಾಗಿ ವರ್ಷದ ಭಾರತೀಯ.......

Published On :
ನವದೆಹಲಿ: ಚೀನಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ 17 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಜಯಿಸಿಕೊಟ್ಟ ಮಾನುಷಿ ಛಿಲ್ಲರ್ ಈ ಸಾಲಿನ ವಿಶೇಷ ಸಾಧನೆಗಾಗಿ ವರ್ಷದ ಭಾರತೀಯ ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೋಹ್ಲಿ, ಮಾನುಷಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಣಕಾಸು ಹಾಗೂ ಕಾರ್ಪೋರೇಟ್ ವ್ಯವಹಾರಗಳ ಸಚಿವ ಅರುಣ್ ಜೇಟ್ಲಿ ಸಹ ಭಾಗವಹಿಸಿದ್ದರು.
ಪ್ರಶಸ್ತಿ ಸ್ವೀಕರಿಸಿದ ಮಾನುಷಿ, ಪ್ರಶಸ್ತಿ ನೀಡಿ ಗೌರವಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.ಟೀಮ್ ಇಂಡಿಯಾ ನಾಯಕ ವಿರಾಟ್ ಕೋಹ್ಲಿ ಸಹ ವಿಶ್ವ ಸುಂದರಿ ಮಾನುಷಿ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಮಾನುಷಿ ಛಿಲ್ಲರ್ ವಿಶ್ವ ಸುಂದರಿ ಪಟ್ಟ ಅಲಂಕರಿಸಿದ ಭಾರತೀಯರ ಪೈಕಿ ಆರನೆಯವರಾಗಿದ್ದು 17 ವರ್ಷಗಳ ಬಳಿಕ ಭಾರತಕ್ಕೆ ಈ ಪುರಸ್ಕಾರ ದಕ್ಕಿಸಿಕೊಟ್ಟ ಕೀರ್ತಿಗೆ ಅವರು ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿManushi ChhillarMiss World 2017ndian of the year special achievement awardಮಿಸ್ ವರ್ಲ್ಡ್ 2017ಮಾನುಷಿ ಛಿಲ್ಲರ್ವವಿಶೇಷ ಸಾಧನೆಗಾಗಿ ವರ್ಷದ ಭಾರತೀ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


