ರೊಹಿಂಗ್ಯನ್ನರ ಗಡಿಪಾರು ವಿವಾದ ವಿಚಾರಣೆಗೆ ಸುಪ್ರೀಂಕೋರ್ಟ್ ನಿಂದ ತ್ರಿಸದಸ್ಯ ಪೀಠ ರಚನೆ
ವಿಶ್ವಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿರುವ ರೊಹಿಂಗ್ಯ ಮುಸ್ಲಿಮರ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Published On :
ನವದೆಹಲಿ: ವಿಶ್ವಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿರುವ ರೊಹಿಂಗ್ಯ ಮುಸ್ಲಿಮರ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ದೇಶದಲ್ಲಿರುವ ರೊಹಿಂಗ್ಯ ಮುಸ್ಲಿಮರನ್ನು ಗುರುತಿಸಿ ಗಡಿಪಾರು ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದಲ್ಲಿ ತ್ರಿಸದಸ್ಯ ಪೀಠವನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ನೂತನ ಪೀಠದಲ್ಲಿ ಇದೇ ಅಕ್ಟೋಬರ್ 13ರಿಂದ ವಿಚಾರಣೆ ಆರಂಭವಾಗಲಿದೆ.
ಈ ಹಿಂದೆ ರೋಹಿಂಗ್ಯ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದ ಕೇಂದ್ರ ಸರ್ಕಾರ, ರೊಹಿಂಗ್ಯ ಮುಸ್ಲಿಮರಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದ್ದು, ಇವರನ್ನು ನಿರಾಶ್ರಿತರು ಎಂದು ಪರಿಗಣಿಸುವುದರಿಂದ ದೇಶದ ಭದ್ರತೆಗೆ ಧಕ್ಕೆಯಾಗಲಿದೆ. ಹೀಗಾಗಿ ಇವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಿ ದೇಶದಿಂದ ಗಡಿಪಾರು ಮಾಡುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಅಟಾರ್ನಿ ಜನರಲ್ ಮೂಲಕ ಅಫಿಡವಿಟ್ ಸಲ್ಲಿಕೆ ಮಾಡಿತ್ತು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್Chief Justice of IndiaRohingyas Issueರೊಹಿಂಗ್ಯಾ ವಿಚಾರಮುಖ್ಯನ್ಯಾಯಮೂರ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.