ಶ್ರೀನಗರ ಕಾರ್ಯಾಚರಣೆ ಅಂತ್ಯ: 3ನೇ ಉಗ್ರನ ಹತ್ಯೆಗೈದ ಸೇನೆ, ಶೋಧ ಕಾರ್ಯ ಆರಂಭ!
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ವಿಮಾನ ನಿಲ್ದಾಣ ಸಮೀಪ ನಡೆಯುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಸೇನಾ ಕಟ್ಟಡದಲ್ಲಿ ಅಡಗಿದ್ದ ಮೂರನೇ ಉಗ್ರನನ್ನೂ ಕೂಡ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರ ವಿಮಾನ ನಿಲ್ದಾಣ ಸಮೀಪ ನಡೆಯುತ್ತಿದ್ದ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಸೇನಾ ಕಟ್ಟಡದಲ್ಲಿ ಅಡಗಿದ್ದ ಮೂರನೇ ಉಗ್ರನನ್ನೂ ಕೂಡ ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಈ ಹಿಂದೆ ಹತರಾಗಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದ ಕಟ್ಟಡದಲ್ಲೇ ಮೂರನೇ ಉಗ್ರನನ್ನೂ ಕೂಡ ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಪ್ರದೇಶದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ ಅಂತ್ಯವಾಗಿದ್ದು, ಪ್ರಸ್ತುತ ಯೋಧರು ಘಟನಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇನ್ನು ಇಂದು ಮುಂಜಾನೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಎಎಸ್ ಐ ಅಧಿಕಾರಿ ಹುತಾತ್ಮರಾಗಿದ್ದು, ಮೂವರು ಯೋಧರು ಗಾಯಗೊಂಡಿದ್ದರು.
ಇನ್ನು ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಕುಖ್ಯಾತ ಉಗ್ರ ಸಂಘಟನೆ ಜೈಶ್ ಇ ಮೊಹಮದ್ ಹೊತ್ತಿದ್ದು, ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದೆ. ಕಳೆದ ವರ್ಷ ನಡೆದ ಉರಿ ಉಗ್ರ ದಾಳಿ ಬಳಿಕ ನಡೆದ ದೊಡ್ಡ ಪ್ರಮಾಣದ ಉಗ್ರ ದಾಳಿ ಇದಾಗಿದ್ದು, ಯೋಧರ ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬೇಕಿದ್ದ ದೊಡ್ಡ ದುರಂತ ತಪ್ಪಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದೆ. ಇನ್ನು ದಾಳಿಯಿಂದಾಗಿ ಯಾವುದೇ ಸ್ಥಳೀಯ ನಾಗರಿಕರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದೂ ಸೇನೆ ಸ್ಪಷ್ಟಪಡಿಸಿದೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಶ್ರೀನಗರದಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದ್ದು, ಶ್ರೀನಗರದಿಂದ ಬೇರೆ ಜಿಲ್ಲೆಗಳಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ನಾಕಾಬಂದಿ ಹಾಕಿ ಕಟ್ಟೆಚ್ಚರದಿಂದ ಶೋಧ ನಡೆಸಲಾಗುತ್ತಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.