ಬಿಎಸ್ಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ: ಓರ್ವ ಯೋಧ ಹುತಾತ್ಮ
ಶ್ರೀನಗರ ಬಿಎಸ್ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು...

Published On :
ಜಮ್ಮು: ಶ್ರೀನಗರ ಬಿಎಸ್ಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಬಿಎಸ್ಎಫ್ 182 ಬೆಟಾಲಿಯನ್ ಪಡೆಯನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಕಾರ್ಯಾಚರಣೆಗಿಳಿದ ಸೇನಾಪಡೆಗಳು ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಅಲ್ಲದೆ, ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಮೂವರು ಯೋಧರ ಪೈಕಿ ಇದೀಗ ಓರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಇನ್ನು ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಉನ್ನತ ನಾಯಕರು ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 11.30 ಗಂಟೆಗೆ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್ಶ್ರೀನಗರSrinagarRajnath Singhಉಗ್ರರ ದಾಳಿಉಗ್ರರ ಹತ್ಯೆಯೋಧ ಹುತಾತ್ಮMilitants killedKashmir Terror AttackBSF campಬಿಎಸ್ಎಫ್ ಕ್ಯಾಂಪ್Jawan Martyred
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


