ಸಿಬಿಐ ವಿಚಾರಣೆಗೆ ಹಾಜರಾಗಲು ಕಾರ್ತಿ ಚಿದಂಬರಂ ನಕಾರ, ಸಮನ್ಸ್ ಹಿಂಪಡೆಯುವಂತೆ ಮನವಿ
ಏರ್ಸೆಲ್-ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿರುವ....

Published On :
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು, ತನಗೆ ನೀಡಿರುವ ಸಮನ್ಸ್ ಹಿಂಪಡೆಯುವಂತೆ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೀಡಿರುವ ಸಮನ್ಸ್ ಪ್ರಶ್ನಿಸಿ ಕಾರ್ತಿ ಚಿದಂಬರಂ ಅವರು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇತ್ಯಾರ್ಥವಾಗುವವರೆಗೆ ತಮಗೆ ನೀಡಿರುವ ಸಮನ್ಸ್ ಹಿಂಪಡೆಯುವಂತೆ ಕಾರ್ತಿ ಸಿಬಿಐಗೆ ಇಂದು ಮನವಿ ಮಾಡಿದ್ದಾರೆ.
ಕಳೆದ ತಿಂಗಳು ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ನಿಮ್ಮ ಹಣಕಾಸು ದಾಖಲೆಗಳೊಂದಿಗೆ ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಕಾರ್ತಿ ಚಿದಂಬರಂಗೆ ಸಮನ್ಸ್ ನೀಡಿತ್ತು. ಆದರೆ ವಿಚಾರಣೆಗೆ ಹಾಜರಾಗಲು ಕಾರ್ತಿ ಚಿದಂಬರಂ ನಿರಾಕರಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಸೆಪ್ಟೆಂಬರ್ 26ರಂದು ನನ್ನ ಕಕ್ಷಿದಾರರಿಗೆ ನೀಡಿರುವ ಸಮನ್ಸ್ ಅನ್ನು ಹಿಂಪಡೆಯುವಂತೆ ನಾನು ಮನವಿ ಮಾಡಿಕೊಳ್ಳುತ್ತೇನೆ ಮತ್ತು ಸುಪ್ರೀಂ ಕೋರ್ಟ್ ಆದೇಶ ನೀಡುವವರೆಗೆ ಕಾಯಿರಿ ಎಂದು ಕಾರ್ಚಿ ಚಿದಂಬರಂ ಪರ ವಕೀಲ ನಟರಾಜನ್ ಅವರು ಸಿಬಿಐಗೆ ಪತ್ರ ಬರೆದಿದ್ದಾರೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಏರ್ ಸೆಲ್ -ಮ್ಯಾಕ್ಸಿಸ್ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಅವರನ್ನು ವಿಚಾರಣೆ ನಡೆಸಲು ಸಿಬಿಐ ಉದ್ದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


