ದೇಶ

ಕಸ್ಕರ್ ಹಣ ಸುಲಿಗೆ ಪ್ರಕರಣ: ದಾವೂದ್ ವಾಂಟೆಡ್ ಆರೋಪಿ

ಬಿಲ್ಡರ್ ವೊಬ್ಬರಿಂದ ಮೂರು ಕೋಟಿ ರುಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ...

ಕಸ್ಕರ್ ಹಣ ಸುಲಿಗೆ ಪ್ರಕರಣ: ದಾವೂದ್ ವಾಂಟೆಡ್ ಆರೋಪಿ
ದಾವೂದ್ ಇಬ್ರಾಹಿಂ
Published On :
ಮುಂಬೈ: ಬಿಲ್ಡರ್ ವೊಬ್ಬರಿಂದ ಮೂರು ಕೋಟಿ ರುಪಾಯಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹೋದರ ಅನೀಶ್ ಇಬ್ರಾಹಿಂ ವಾಂಟೆಡ್ ಆರೋಪಿಗಳು ಎಂದು ತೋರಿಸಿರುವುದಾಗಿ  ಥಾಣೆ ಪೊಲೀಸರು ಬುಧವಾರ ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಕಿರಿಯ ಸಹೋದರ ಇಖ್ಬಾಲ್ ಕಸ್ಕರ್ ವಿರುದ್ಧವೂ ಕೇಸ್ ದಾಖಲಿಸಲಾಗಿದೆ.
ಬಿಲ್ಡರ್ ನೀಡಿದ ದೂರಿನ ಆಧಾರದ ಮೇಲೆ ಕಸ್ಕರ್ ಮತ್ತು ದಾವೂದ್ ಗ್ಯಾಂಗ್ ವಿರುದ್ಧ ನಿನ್ನೆ ಥಾಣೆ ಕ್ರೈಂ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ತನಿಖೆಯ ವೇಳೆ, ಮೂರು ಕೋಟಿ ರುಪಾಯಿ ಸುಲಿಗೆ ದಂಧೆಯಲ್ಲಿ ದಾವೂದ್ ಮತ್ತು ಅನೀಶ್ ಪಾತ್ರವಿರುವುದು ಸ್ಪಷ್ಟವಾಗಿದೆ. ಹೀಗಾಗಿ ಅವರನ್ನು ವಾಂಟೆಡ್ ಆರೋಪಿಗಳು ಎಂದು ತೋರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸುಲಿಗೆ ದಂಧೆಯಲ್ಲಿ ಭಾಗಿಯಾದ ಆರೋಪದ ಮೇಲೆ ಕಳೆದ ತಿಂಗಳು ಕಸ್ಕರ್ ನನ್ನು ಬಂಧಿಸಿದ ನಂತರ ಆತನ ವಿರುದ್ಧ ದಾಖಲಾದ ಮೂರನೇ ಸುಲಿಗೆ ಪ್ರಕರಣ ಇದಾಗಿದೆ.
1993ರ ಮುಂಬೈ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವೂದ್ ಸದ್ಯ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.